24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಎರಡು ದಿನದ ರಾಜ್ಯ ಮಟ್ಟದ ವಿಜ್ಞಾನ ಮೇಳದ ಎಕ್ಸ್‌ಪೀರಿಯ- 2ಕೆ22 ಕಾರ್ಯಕ್ರಮವು ಡಿ. 22ರಂದು ವಿದ್ಯುಕ್ತವಾಗಿ ಆರಂಭಗೊಂಡಿತು.
ಮೂಡಬಿದಿರೆಯ ಎಕ್ಸಲೆಂಟ್ ವಿದ್ಯಾ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಮೇಳವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ,
ನಂಬಿಕೆ ಮತ್ತು ವಿಶ್ವಾಸದಿಂದ ಜೀವನದಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯವಾಯಿತು. ನಾವು ನಮ್ಮ ಜೀವನದ ಉದ್ದೇಶಗಳನ್ನು ತಿಳಿದುಕೊಂಡು ಪೂರ್ಣರೀತಿಯ ಮಾಹಿತಿಯನ್ನು ಯಾವುದೇ ರೀತಿಯಲ್ಲಿ ಮುನ್ನಡೆಸಿದರೆ ಅದನ್ನು ಯಶಸ್ವಿಯಾಗಿ ಮಾಡಲು ಸೂಚಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ, ಇವರು ವಹಿಸಿ ಮಾತನಾಡಿ, ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಮತ್ತು ಮೌಲ್ಯಾಧಾರಿತ ಶಿಕ್ಷಣದಿಂದ ಪ್ರಸಿದ್ಧವಾಗಿದೆ, ವಿದ್ಯಾರ್ಥಿಗಳು ಒಳ್ಳೆಯ ವಿದ್ಯಾರ್ಥಿಗಳು, ತಂತ್ರಜ್ಞರು ಆಗಬೇಕು. ಹೃದಯ ವೈಶಾಲ್ಯವಿರುವ ಸುಶಿಕ್ಷಿತ ಸಮಾಜವನ್ನು ನಿರ್ಮಿಸುವುದು ನಮ್ಮ ಶಿಕ್ಷಣ ಸಂಸ್ಥೆಗಳ ಧ್ಯೇಯವಾಗಿದೆ ಎಂದು ಹೇಳಿದರು.
ಎರಡು ದಿನಗಳ ಕಾಲ ನಡೆಯುವ ಮೇಳದಲ್ಲಿ ವಿಜ್ಞಾನ ರಸಪ್ರಶ್ನೆ, ಗಣಿತದ ಒಗಟು, ಹ್ಯಾಕಥಾನ್, ಸಿ.ಲ್ಯಾಗ್ವೆಜ್ ರಸಪ್ರಶ್ನೆ, ವಿಜ್ಞಾನ ಮಾದರಿ ತಯಾರಿ, ಟ್ರೆಷರ್ ಹಂಟ್ ಮೊದಲಾದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಂಜೆ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಶ್ರೀ ಧರ್ಮ ಕ್ಷೇತ್ರ ಮಹಾತ್ಮ ಎಂಬ ಹೊನಲು ಬೆಳಕಿನ `ದೃಶ್ಯರೂಪಕ’ವನ್ನು ಅಳವಡಿಸಲಾಗಿದೆ.
ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರು ಹಾಗೂ ಕಾರ್ಯಕ್ರಮ ಸಂಯೋಜಕರಾದ ರವೀಶ್ ಪಡುಮಲೆ ವೇದಿಕೆಯಲ್ಲಿ.
ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ್ ಕುಮಾರ್ ಟಿ. ಸ್ವಾಗತಿಸಿದರು. ಡಾ. ಸಂಜಯ್ ಕಾರ್ಯಕ್ರಮ ನಿರೂಪಿಸಿ, ಸಂಯೋಜಕ ರವೀಶ್ ಉಡುಗೊರೆ.

Related posts

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya
error: Content is protected !!