April 2, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

ಬೆಳ್ತಂಗಡಿ: ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆಯ ಆರೋಪಿಗಳಿಗೆ ರಾಜಕೀಯ ರಕ್ಷಣೆ, ಆರೋಪಿಗಳನ್ನು ಬಂಧನಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ರಷ ಸಮಿತಿ(ರಿ) ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ, ಮೊಗೇರ ಸಂಘ ಸಮನ್ವಯ ಸಮಿತಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸಂಘ(ರಿ) ಇದರ ವತಿಯಿಂದ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಡಿ.29ರಂದು ಪತ್ರಿಕಾಗೋಷ್ಠಿ ಜರುಗಿತು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘಷ೯ ಸಮನ್ವಯ ಸಮಿತಿ ಜಿಲ್ಲಾ ಕಾಯ೯ದಶಿ೯ ಅಶೋಕ್ ಕೊಂಚಾಡಿ ಮಾತನಾಡಿ,
ಶಿಬಾಜೆ ಗ್ರಾಮದ ಕುರುಂಜ ಎಂಬಲ್ಲಿ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದಿರುವ ಾರೋಪಿಗಳ ಮೇಲೆ, ದರೋಡೆ, ಹಲ್ಲೆ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದರೂ ರಾಜಕೀಯ ಒತ್ತಡಕ್ಕೆ ಒಳಗಾದ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸದೆ ರಕ್ಷಣೆಗೆ ಮುಂದಾಗಿರುವ ಘಟನೆ ನಡೆದಿದೆ. ಪ್ರಕರಣವನ್ನು ಖಂಡಿಸಿರುವ ಮೊಗೇರ ಸಂಘ ಮತ್ತು ದಲಿತ ಸಂಘಟನೆಗಳ ಸಮನ್ವಯ ಸಮಿತಿಯು ಆರೋಪಿಗಳನ್ನು ತಕ್ಷಣ ಬಂಧಿಸಿ ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಸರಕಾರವು ತಕ್ಷಣ ಪ್ರಕರಣವನ್ನು ವಿಶೇಷ ನೆಲೆಯಲ್ಲಿ ಕೈಗೆತ್ತಿಕೊಳ್ಳಬೇಕು. ತನಿಖಾಧಿಕಾರಿಯನ್ನು ಬದಲಾಯಿಸಿ ಉನ್ನತಮಟ್ಟದಲ್ಲಿ ಸಿಓಡಿ ತನಿಖೆ ನಡೆಸಬೇಕು. ಹಾಗೂ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯ ವಿರುದ್ಧ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸುವುದಾಗಿ
ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದ.ಸಂ.ಸ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರಧಾನ ಸಂಚಾಲಕರು ನೇಮಿರಾಜ್ ಕೆ, ಮೊಗೇರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕನ್ಯಾಡಿ ಮಾತನಾಡಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದರು.
ಮೊಗೇರ ಸಮನ್ವಯ ಸಮಿತಿ ಅಧ್ಯಕ್ಷ ಕೊರಗಪ್ಪ ಅಳದಂಗಡಿ , ಕಾರ್ಯದರ್ಶಿ ಜಗದೀಶ್ ಕಕ್ಕಿಂಜೆ, ಜಿಲ್ಲಾ ಸಮಿತಿ ಸದಸ್ಯ ವೆಂಕಣ್ಣ ಕೊಯ್ಯೂರು ಉಪಸ್ಥಿತರಿದ್ದರು.

Related posts

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya
error: Content is protected !!