ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಭಜನೆ ಮತ್ತು ಭಜಕರ ಕುರಿತು ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಪೋಸ್ಟ್‌ಗಳನ್ನು ಹಾಕಿರುವ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಎಂಬವರನ್ನು ತಕ್ಷಣ ಬಂಧಿಸುವಂತೆ ಡಿ.29ರಂದು ವಿ.ಹಿಂ.ಪ. ಬಜರಂಗದಳ, ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಠಾಣೆಯ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಅವರು ಮಾತನಾಡಿ, ಹಿಂದೂ ಧರ್ಮದ ಭಜನೆ ಮತ್ತು ಭಜಕರ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಜಾಮೀನು ರಹಿತ ಪ್ರಕರಣ ದಾಖಲಾಗಿದ್ದರೂ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ಆರೋಪಿಯನ್ನು ಬಂಧಿಸದಿರುವ ಹಿನ್ನಲೆಯಲ್ಲಿ ಪೊಲೀಸರ ಮೇಲೆಯೂ ಅನುಮಾನ ಕಾಡುತ್ತಿದೆ. ಆರೋಪಿಯನ್ನು ಬಂಧನಕ್ಕಾಗಿ ಇಂದು ಸಣ್ಣ ಮಟ್ಟದಲ್ಲಿ ಭಜನೆ ಮೂಲಕ ಪ್ರತಿಭಟನೆ ಮಾಡಲಾಗಿದೆ.ಶ ಒಂದು ವೇಳೆ ಬಂಧಿಸದಿದ್ದಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಪ್ರತಿಭಟನೆ ನಡೆಸಲಾಗುವುದು. ಈ ಸಂದರ್ಭ ಯಾವುದಾದರೂ ಅಹಿತಕರ ಘಟನೆ ನಡೆದರೆ ಅದಕ್ಕೆ ಅರಣ್ಯ ಮತ್ತು ಪೊಲೀಸ್ ಇಲಾಖೆ ನೇರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಬೆಳ್ತಂಗಡಿ ಪೊಲೀಸ್ ಠಾಣೆಯ ಎದುರು ಭಜನೆ ಮಾಡಿ ಪ್ರತಿಭಟನೆ ನಡೆಸಿ, ನಂತರ ಆರೋಪಿಯ ಬಂಧನಕ್ಕೆ ಒತ್ತಾಯಿಸಿ, ಎಸ್.ಐ ನಂದಕುಮಾರ್ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲ ಗಣೇಶ್ ಕಳೆಂಜ ಬಜರಂಗದಳ ಜಿಲ್ಲಾ ಅಖಾಡ ಪ್ರಮುಖ್ ದಿನೇಶ್ ಚಾರ್ಮಾಡಿ ವಿ.ಹಿಂ.ಪ ಪ್ರಖಂಡ ಅಧ್ಯಕ್ಷರು.ಸಂತೋಷ್ ಅತ್ತಾಜೆ ಸಂಯೋಜಕರು ಮೋಹನ್ ಬೆಳ್ತಂಗಡಿ ರಮೇಶ್ ಧರ್ಮಸ್ಥಳ
ಸುಧೀರ್ ಚಾರ್ಮಾಡಿ ರಿಜೇಶ್ ಗುರುವಾಯನಕೆರೆ
ಭಜನಾ ಪರಿಷತ್ ನಿಕಟಪೂರ್ವ ಅಧ್ಯಕ್ಷರು ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು.

Leave a Comment

error: Content is protected !!