37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

ಬೆಳ್ತಂಗಡಿ: ‘ಭ್ರಷ್ಟಾಚಾರ ಅಳಿಸಿ, ನೇತ್ರಾವತಿ ಉಳಿಸಿ’ ರಕ್ಷಿತ್ ಶಿವರಾಂ ಅವರ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ ಎಂದು ಮಾಜಿ ಶಾಸಕ ವಸಂತ ಬಂಗೇರ ಹೇಳಿದರು. ಅವರು ಜ .2 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಹಾಗೂ ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಜ .7 ರಂದು ಬೃಹತ್ ಪ್ರತಿಭಟನೆಯನ್ನು ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ನೇತ್ರಾವತಿ ಉಳಿಸಿ ಭ್ರಷ್ಟಾಚಾರ ನಿಲ್ಲಿಸಿ ಹಾಗೂ ವಿವಿಧ ವಿಚಾರಗಳ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ ಮುಂಡಾಜೆಯಿಂದ ಉಪ್ಪಿನಂಗಡಿಯವರೆಗೆ ಹಾಗೂ ಬೆಳ್ತಂಗಡಿಯಲ್ಲಿ ಹಕ್ಕೊತ್ತಾಯ ಸಭೆಯು ನಡೆಯಲಿದ್ದು,
ಈ ಸಭೆಗೆ ಕಾಂಗ್ರೆಸ್ ಪಕ್ಷದ ಬೆಂಬಲ ಇದೆಯೇ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕಾರ್ಯಕ್ರಮದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕಾಗಲಿ ನನಗಾಗಲಿ ಯಾವುದೇ ಮಾಹಿತಿ ಇಲ್ಲ ಜ 07 ರಂದು ನಡೆಯುವ ಪ್ರತಿಭಟನೆ ಪಕ್ಷದ ಅಧಿಕೃತ ಕಾರ್ಯಕ್ರಮವಾಗಿದ್ದು ಜ 08 ರಂದು ನಡೆಯುವ ಜಾಥ ಅವರ ವೈಯಕ್ತಿಕ ಕಾರ್ಯಕ್ರಮವಾಗಿದೆ ಅದ್ದರಿಂದ ಅದಕ್ಕೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಗಂಗಾಧರ್ ಗೌಡ, ಶೈಲೇಶ್ ಕುಮಾರ್, ರಂಜನ್ ಗೌಡ, ಎ.ಸಿ ಮ್ಯಾಥ್ಯೂ, ಜಗದೀಶ್ ಡಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya
error: Content is protected !!