April 7, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

ಬೆಂಗಳೂರು ಡಿ29: ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರ ಸೂಚನೆಯ ಮೇರೆಗೆ ಜನವರಿ 31,ರ ವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ರಾಜ್ಯದಿಂದ ಪ್ರಪ್ರಥಮ ಬಾರಿಗೆ ಚಾರ್‌ಧಾಮ್‌ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ 20 ಸಾವಿರದಂತೆ ಹಾಗೂ ಕೈಲಾಶ ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರದಂತೆ ಸರಕಾರದ ಸಹಾಯಧನವನ್ನ ನೀಡಲಾಗುತ್ತದೆ. ಇದಕ್ಕೆ ಡಿಸೆಂಬರ್‌ 1 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಈ ಬಾರಿ ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳುವ ಸಂಧರ್ಭದಲ್ಲಿ ಜನಸಂಧಣಿ ಹೆಚ್ಚಾಗಿದ್ದರಿಂದ ಹಾಗೂ ತಾಂತ್ರಿಕ ಕಾರಣಗಳಿಂದ ಯಾತ್ರಾರ್ಥಿಗಳು ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳುವುದಕ್ಕೆ ಸಾಧ್ಯವಾಗಿರಲಿಲ್ಲ. ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳನ್ನ ಪಡೆದುಕೊಳ್ಳುವುದಕ್ಕೆ ಅವಕಾಶ ನೀಡುವಂತೆ ಬೆಳಗಾವಿಯ ಅಧಿವೇಶನದಲ್ಲಿ ಹಲವಾರು ಶಾಸಕರು ಮಾನ್ಯ ಸಚಿವರಿಗೆ ಮನವಿ ಮಾಡಿದ್ದರು. ಹೆಚ್ಚಿನ ಜನರು ಅರ್ಜಿ ಸಲ್ಲಿಸಲಿ ಎನ್ನುವ ಉದ್ದೇಶದಿಂದ, ಹಾಗೂ ಅಗತ್ಯ ದಾಖಲೆಗಳನ್ನ ಕ್ರೋಢೀಕರಿಸಲು ಅವಕಾಶ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಅವರ ಸೂಚನೆಯಂತೆ. ಈಗ ಅರ್ಜಿ ಸಲ್ಲಿಕೆಗೆ ಇದ್ದಂತಹ ಸಮಸ್ಯೆಗಳನ್ನು ನಿವಾರಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕವನ್ನ ಒಂದು ತಿಂಗಳುಗಳ ಕಾಲ (ಜನವರಿ 31) ವಿಸ್ತರಿಸಲಾಗಿದೆ.

—————————————————————————

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಗೆ ತೆರಳಿರುವ ಯಾತ್ರಾರ್ಥಿಗಳಿಗೆ ಸಹಾಯಧನ ನೀಡುವುದು ನಮ್ಮ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು. ಹೆಚ್ಚಿನ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಲು ಅವಕಾಶ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಜನವರಿ 31,2023 ರ ತನಕ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದ್ದೇವೆ.

ಶ್ರೀಮತಿ ಶಶಿಕಲಾ ಜೊಲ್ಲೆ

Related posts

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ