April 2, 2025
ಜಿಲ್ಲಾ ಸುದ್ದಿರಾಜ್ಯ ಸುದ್ದಿ

ದ.ಕ ಜಿಲ್ಲಾ ಕಾಯ೯ನಿರತ ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ

ಬೆಳ್ತಂಗಡಿ: ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನ ‘ಸಾಧನ ಸಂಭ್ರಮ’ ಸಮ್ಮೇಳನವು ಜ.3 ರಂದು ಕುದ್ಮುಲ್ ರಂಗ ರಾವ್ ಪುರಭವನ ಮಂಗಳೂರು ಇಲ್ಲಿ ಜರುಗಿತು.
ಬೆಂಗಳೂರು ಎಂ.ಆರ್‌ಜಿ ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ ವಹಿಸಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್ ಪತ್ರಕರ್ತರ ಕ್ಷೇಮನಿಧಿಗೆ ಚಾಲನೆ ನೀಡಿದರು.
ವಿಪಕ್ಷ ನಾಯಕ ಯು.ಟಿ ಖಾದರ್ ಛಾಯ ಚಿತ್ರ ಪ್ರದರ್ಶನ ಉದ್ಘಾಟಿಸಿದರು. ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಪತ್ರಕರ್ತರಿಗೆ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಉಪಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ, ಪಟ್ಲ ಪೌಂಡೇಶನ್ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬ್ಯಾಂಕ್ ಆಫ್ ಬರೋಡ ಮುಖ್ಯಸ್ಥೆ ಗಾಯತ್ರಿ, ಜಯಾನಂದ ಅಂಚನ್, ಕಿಯೋನಿಕ್ಸ್ ಅಧ್ಯಕ್ಷ
ಹರಿಕೃಷ್ಣ ಬಂಟ್ವಾಳ್, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಪತ್ರಕತ೯ರ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜೀತೆಂದ್ರ ಕುಂದೇಶ್ವರ, ಜಿಲ್ಲಾ ಸಂಘದ ಪದಾಧಿಕಾರಿಗಳು
ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya
error: Content is protected !!