23.8 C
ಪುತ್ತೂರು, ಬೆಳ್ತಂಗಡಿ
May 20, 2025
ಅಪರಾಧ ಸುದ್ದಿಜಿಲ್ಲಾ ಸುದ್ದಿ

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

ಮಂಗಳೂರು: ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಂಬರ್-ಗ್ರೀಸ್(ತಿಮಿಂಗಿಲ ವಾಂತಿ)ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಅವರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಲಾಲ್ ಭಾಗ್ ನ ಕರಾವಳಿ ಮೈದಾನ ಪರಿಸರದಲ್ಲಿ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್-ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ. ನೇತ್ರತ್ವದ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಪಡ್ಯಾರು ನಿವಾಸಿ ನಿಮಿತ್(26ವ) ಮತ್ತು ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಯೋಗೀಶ್ ಪೂಜಾರಿ (41ವ) ಎಂದು ಗುರುತಿಸಲಾಗಿದೆ.

ಬಂದಿತರಿಂದ 3.2 ಕೆಜಿ ತೂಕದ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಹಾಗೂ 2 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಬೆಲೆ ಸುಮಾರು 3.2 ಕೋಟಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಸಿ.ಸಿ.ಬಿ. ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ., ಪಿಎಸ್‌ಐ ರಾಜೇಂದ್ರ ಬಿ, ಸುದೀಪ್ ಎಂ.ವಿ. ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಜಡಿ ಮಳೆ: ಸಂಪೂರ್ಣ ಕುಸಿದು ಬಿದ್ದ ಉಜಿರೆ ಹಳೆಪೇಟೆ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!