28.2 C
ಪುತ್ತೂರು, ಬೆಳ್ತಂಗಡಿ
September 8, 2026
ಅಪರಾಧ ಸುದ್ದಿಜಿಲ್ಲಾ ಸುದ್ದಿ

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

ಮಂಗಳೂರು: ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಂಬರ್-ಗ್ರೀಸ್(ತಿಮಿಂಗಿಲ ವಾಂತಿ)ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಅವರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಲಾಲ್ ಭಾಗ್ ನ ಕರಾವಳಿ ಮೈದಾನ ಪರಿಸರದಲ್ಲಿ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್-ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ. ನೇತ್ರತ್ವದ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಪಡ್ಯಾರು ನಿವಾಸಿ ನಿಮಿತ್(26ವ) ಮತ್ತು ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಯೋಗೀಶ್ ಪೂಜಾರಿ (41ವ) ಎಂದು ಗುರುತಿಸಲಾಗಿದೆ.

ಬಂದಿತರಿಂದ 3.2 ಕೆಜಿ ತೂಕದ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಹಾಗೂ 2 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಬೆಲೆ ಸುಮಾರು 3.2 ಕೋಟಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಸಿ.ಸಿ.ಬಿ. ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ., ಪಿಎಸ್‌ಐ ರಾಜೇಂದ್ರ ಬಿ, ಸುದೀಪ್ ಎಂ.ವಿ. ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya
error: Content is protected !!