ಮುಂಡಾಜೆ:ಇಲ್ಲಿನ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನೋತ್ಸವವನ್ನು ʼರಾಷ್ಟ್ರೀಯ ಯುವ ದಿನʼವನ್ನಾಗಿ ಆಚರಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಡಾ.ಸುಬ್ರಹ್ಮಣ್ಯ ಕೆ. ಮಾತನಾಡಿ,” ಸ್ವಾಮಿ ವಿವೇಕಾನಂದರು ಭಾರತದ ಸಂಸೃತಿ, ಜ್ಞಾನ, ಆಧ್ಯಾತ್ಮಿಕತೆ ಮತ್ತು ಸಹೋದರತೆಯನ್ನು ಜಗತ್ತಿಗೆ ಸಾರಿದವರು. ಇಂದಿನ ಯುವ ಜನತೆ ವಿವೇಕಾನಂದರ ಆದರ್ಶಗಳನ್ನು ಸಂಕಲ್ಪ ಮಾಡಿ ಅನುಷ್ಟಾನಕ್ಕೆ ತರಬೇಕು” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಸ್ಥಾನೀಯ ಸಮಿತಿ ಅಧ್ಯಕ್ಷ ವಿನಯಚಂದ್ರ ವಹಿಸಿದ್ದರು. ಪ್ರಿನ್ಸಿಪಾಲ್ ಜಾಲಿ ಡಿ’ಸೋಜ ಉಪಸ್ಥಿತರಿದ್ದರು. ಇಂಗ್ಲಿಷ್ ಭಾಷಾ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಸ್ವಾಗತಿಸಿ, ಮನಃಶಾಸ್ತ್ರ ಉಪನ್ಯಾಸಕಿ ನಮಿತಾ ಕೆ.ಆರ್. ಕಾರ್ಯಕ್ರಮ ನಿರೂಪಿಸಿದರು. ಇತಿಹಾಸ ಉಪನ್ಯಾಸಕಿ ಗೀತಾ ಗೋಪಾಲ್ ವಂದಿಸಿದರು.