ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದು ಇಕೆವೈಸಿ ಮಾಡಿಸಲು ಸೂಚಿಸಲಾಗಿದೆ.
ಇಕೆವೈಸಿ ಮಾಡಿಸದೆ ಇದ್ದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ ಮುಂದೆ ಬರುವ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅರ್ಹತೆ ಇರುವುದಿಲ್ಲ. ಈ ಕುರಿತು ತಾಲೂಕಿನ ರೈತರು ಸ್ವತ:(PMkissan.gov.in) ತಂತ್ರಾಂಶದಲ್ಲಿ ಒಟಿಪಿ ದ ಕಳಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ತಮ್ಮ ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಿಸಿ ಕಡ್ಡಾಯವಾಗಿ ಇಕೆವೈಸಿ ಮಾಡಿಸಿ ಕೊಳ್ಳುವಂತೆ ತಿಳಿಸಲಾಗಿದೆ.
ಇಕೆವೈಸಿ ಮಾಡಿಸಲು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಟ್ಟದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಡಿಜಿಟಲ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.