September 6, 2026
Uncategorized

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದು ಇಕೆವೈಸಿ ಮಾಡಿಸಲು ಸೂಚಿಸಲಾಗಿದೆ.


ಇಕೆವೈಸಿ ಮಾಡಿಸದೆ ಇದ್ದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ ಮುಂದೆ ಬರುವ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅರ್ಹತೆ ಇರುವುದಿಲ್ಲ. ಈ ಕುರಿತು ತಾಲೂಕಿನ ರೈತರು ಸ್ವತ:(PMkissan.gov.in) ತಂತ್ರಾಂಶದಲ್ಲಿ ಒಟಿಪಿ ದ ಕಳಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ತಮ್ಮ ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಿಸಿ ಕಡ್ಡಾಯವಾಗಿ ಇಕೆವೈಸಿ ಮಾಡಿಸಿ ಕೊಳ್ಳುವಂತೆ ತಿಳಿಸಲಾಗಿದೆ.
ಇಕೆವೈಸಿ ಮಾಡಿಸಲು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಟ್ಟದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಡಿಜಿಟಲ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related posts

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!