23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕರಾವಳಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ


ಬೆಳ್ತಂಗಡಿ: ಜ.22 ರಂದು ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ “ಪ್ರಜಾಧ್ವನಿ ಯಾತ್ರೆ”ಯ ಪೂರ್ವ ಸಮಾಲೋಚಾನ ಸಭೆಯು ಇಂದು ಬೆಳ್ತಂಗಡಿಯ ನಗರ ಮತ್ತು ಗ್ರಾಮೀಣ ಬ್ಲಾಕಿನ ಗುರುನಾರಾಯಣ ಸ್ವಾಮಿ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಪ್ರಜಾಧ್ವನಿ ಯಾತ್ರೆ ಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕಾರ್ಯಕರ್ತಗೆ ಕರೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಸಂತ ಬಂಗೇರ, ಮಾಜಿ ಸಚಿವರಾದ ಗಂಗಾಧರ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯಾದ ರಕ್ಷಿತ್ ಶಿವರಾಮ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಮತ್ತು ರಂಜನ್ ಗೌಡ ಹಾಗೂ ಕಾಂಗ್ರೆಸ್ ನ ಪ್ರಮುಖ ಮುಖಂಡರುಗಳು ಕಾರ್ಯಕರ್ತರ ಸಭೆಯಲ್ಲಿ ಉಪಸ್ಥಿತರಿದ್ದರು.

Related posts

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya
error: Content is protected !!