ಶಾಲಾ ಕಾಲೇಜು

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಮಧುಶ್ರೀ ವರ್ಷದ ಯುವ ವಿಜ್ಞಾನಿ ಪ್ರಶಸ್ತಿ

ಉಜಿರೆ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಆಶ್ರಯದಲ್ಲಿ ಕಲಬುರ್ಗಿಯ ಖಣದಾಳದಲ್ಲಿ ನಡೆದ 30ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಉಜಿರೆಯ ಶ್ರೀಧ.ಮಂ. ಆಂಗ್ಲ ಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ) 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಮಂಡಿಸಿದ ‘ಅಡಕೆ ಸಿಪ್ಪೆಯಿಂದ ಪೇಪರ್ ತಯಾರಿ’ ಎಂಬ ಕಾರ್ಯಯೋಜನೆಗೆ ಗ್ರಾಮೀಣ ವಿಭಾಗದ ಕಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ದೊರೆತಿದ್ದು ಅವರು ವರ್ಷದ ಯುವ ವಿಜ್ಞಾನಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ 210ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಇದರಲ್ಲಿ ಆರು ವಿದ್ಯಾರ್ಥಿಗಳು ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದು ಮಧುಶ್ರೀ ಪ್ರಥಮ ಸ್ಥಾನ ಪಡೆದರು. ರಾಷ್ಟ್ರಮಟ್ಟದ ಸಮಾವೇಶ ಜ. 28ರಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆಯಲಿದೆ.
ಕಾರ್ಯಯೋಜನೆಯಲ್ಲಿ ಇದೇ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ದೀಪಿಕಾ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಹಾಗೂ ವಿಜ್ಞಾನ ಶಿಕ್ಷಕಿ ಶೋಭಾ ಅವರು ಕಾರ್ಯಯೋಜನೆಗೆ
ಮಾರ್ಗದರ್ಶನ ನೀಡಿದ್ದರು.

Related posts

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!