29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

ಬೆಳ್ತಂಗಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ ಮತ್ತು ದ.ಕ. ಜಿಲ್ಲೆಯ ಸಮಸ್ತ ದಲಿತ ಸಂಘಟನೆಗಳ ನೇತೃತ್ವದಲ್ಲಿ ಶಿಬಾಜೆ ಗ್ರಾಮದಲ್ಲಿ ದಲಿತ ಯುವಕ ಶ್ರೀಧರ್ ಅವರ

ಅಮಾನುಷ ಕೊಲೆಯನ್ನು ಖಂಡಿಸಿ, ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ, ಶಿಬಾಜೆ ಗ್ರಾಮ ಮತ್ತು ರಾಜ್ಯಾದ್ಯಂತ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗೆ ಆಗ್ರಹಿಸಿ ಧರ್ಮಸ್ಥಳದ ನೇತ್ರಾವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ಹಾಗೂ ಪೊಲೀಸ್ ಠಾಣೆಯ ಎದುರು ಬೃಹತ್ ಪ್ರತಿಭಟನೆ ಜ.23 ರಂದು ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ರಾಜ್ಯ ಸಂಘಟನಾ ಸಂಚಾಲಕ ಮಲ್ಲೇಶ್ ಅಂಬುಗ, ಮಾತನಾಡಿ, ದಲಿತ ಮೇಲೆ ದೌರ್ಜನ್ಯ ಒಂದು ಜಿಲ್ಲೆಯ ಸಮಸ್ಯೆಯಲ್ಲ, ಇಡೀ ರಾಜ್ಯದಲ್ಲಿ ದಲಿತರನ್ನು ದಮನಿಸುವ ಕಾರ್ಯ ಇಂದು ನಡೆಯುತ್ತಿದೆ. ನಮಗೆ ರಕ್ಷಣೆ ನೀಡಿ, ಜನಸ್ನೇಹಿಯಾಗಬೇಕಾಗಿದ್ದ ಪೊಲೀಸರು, ದಲಿತರ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ, ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್,
ದ.ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ನೇಮಿರಾಜ ಕಿಲ್ಲೂರು, ಶೇಖರ ಕುಕ್ಕೇಡಿ, ರಮೇಶ್. ಆರ್, ತಾಲೂಕು ಮೋಗೇರ ಸಂಘದ ಅಧ್ಯಕ್ಷ ಕೊರಗಪ್ಪ ಅಳದಂಗಡಿ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕನ್ಯಾಡಿ, ಸೇಸಪ್ಪ ಬೆದ್ರಕಾಡು, ಆನಂದ ಮಂಗಳೂರು, ವಸಂತ ಕುಬಲಾಡಿ, ಮೋನಪ್ಪ ಚಿಕ್ಕಮಗಳೂರು, ಪ್ರಭಾಕರ ನಲ್ಕೆ, ಗಿರೀಶ್ ಉಳ್ಳಾಲ, ಮೋನಪ್ಪ ಮೂಡಿಗೆರೆ, ಶೇಖರ್. ಎಲ್, ಬೇಬಿ ಸುವರ್ಣ, ಲೋಕೇಶ್ ಪಡುಬಿದ್ರೆ, ರವಿ ಮೂಡಿಗೆರೆ ಹಾಗೂ ಡಿಎಸ್‌ಎಸ್ ತಾಲೂಕಿನ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರತಿಭಟನೆಗೆ ಮಾಜಿ ಸಚಿವ ಕೆ. ಗಂಗಾಧರ ಗೌಡ, ಬೆಸ್ಟ್ ಪೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಂ, ಕಾರ್ಮಿಕ ಮುಖಂಡ ಬಿ.ಎಂ ಭಟ್, ಎಲ್. ಮಂಜುನಾಥ್ ಆಗಮಿಸಿ ಬೆಂಬಲ ಸೂಚಿಸಿದರು. ಪ್ರತಿಭಟನೆಗೆ ಮೊದಲು ನೇತ್ರಾವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya
error: Content is protected !!