September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಉಜಿರೆಯಲ್ಲಿ ಫೆಬ್ರವರಿ 03, 04 ಮತ್ತು 05ರಂದು ನಡೆಯಲಿರುವ ದ ಕ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರ ಸಹಕಾರ ಲಭ್ಯವಾಗಿ ಸಮ್ಮೇಳನವು ಎಲ್ಲರ ಸಮ್ಮೇಳನವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸುತ್ತಾ, ಈ ಸಮ್ಮೇಳನವು ಬೆಳ್ತಂಗಡಿ ತಾಲೂಕಿನಲ್ಲಿ ಜರಗುತ್ತಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ. ಬಹಳಷ್ಟು ವಿಚಾರಗಳು ಸಮ್ಮೇಳನದಲ್ಲಿ ಚರ್ಚೆಯಾಗಲಿದ್ದು, ನಾಡಿನ ಭಾಷೆ , ಸಂಸ್ಕೃತಿ ಮತ್ತು ಸಾಹಿತ್ಯಿಕ ವಾತಾವರಣ ಬೆಳೆಸುವಲ್ಲಿ ಒಳ್ಳೆಯ ಪ್ರೇರಣೆ ಮತ್ತು ಮಾರ್ಗದರ್ಶನ ನೀಡುವಂತಾಗಲಿ ಎಂದು ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಆಶಿಸಿದರು‌.
ಮಾನ್ಯ ಶಾಸಕರು ಜಿಲ್ಲಾ ಸಮ್ಮೇಳನದ ಸ್ವಾಗತ ಸಮಿತಿ ಮತ್ತು ಸಂಯೋಜನಾ ಸಮಿತಿಯ ಸದಸ್ಯರ ಭೇಟಿ ಸಂದರ್ಭದಲ್ಲಿ ಸಮ್ಮೇಳನದ ರೂಪುರೇಷೆಗಳ ಬಗ್ಗೆ ವಿಚಾರ ವಿನಿಮಯ ನಡೆಸುವ ಸಂದರ್ಭದಲ್ಲಿ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದರು.

ಮಾನ್ಯ ಶಾಸಕರು ಸಮ್ಮೇಳನದ ಸಂಯೋಜನಾ ಸಮಿತಿಯ ಗೌರವ ಕಾರ್ಯಾಧ್ಯಕ್ಷರೂ ಆಗಿರುವುದರಿಂದ, ಅವರಿಗೆ ಆಮಂತ್ರಣ ಪತ್ರಿಕೆ ನೀಡುವುದರೊಂದಿಗೆ ಸಮ್ಮೇಳನದ ಕೆಲಸ ಕಾರ್ಯಗಳ ಪ್ರಗತಿಯ ಬಗ್ಗೆಯೂ ಅವರೊಂದಿಗೆ ಚರ್ಚಿಸಲಾಯಿತು.

ಸಮ್ಮೇಳನದ ಸಂಯೋಜನಾ ಸಮಿತಿಯು ಮಾನ್ಯ ಶಾಸಕರ ಭೇಟಿಯನ್ನು ಅವರ ಮನೆಯಲ್ಲಿ, ಉಜಿರೆ ಗ್ರಾಮ ಪಂಚಾಯತ್ ಆಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿಯವರ ನೇತೃತ್ವದಲ್ಲಿ ಮಾಡಿದ್ದು , ಜಿಲ್ಲಾ ಕ ಸಾ ಪ ದ ಅಧ್ಯಕ್ಷರಾದ ಡಾ. ಎಂ ಪಿ ಶ್ರೀನಾಥ, ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ರಾಜೇಶ್ವರಿ, ಬೆಳ್ತಂಗಡಿ ತಾಲೂಕು ಕ ಸಾ ಪ ಅಧ್ಯಕ್ಷರಾದ ಡಿ. ಯದುಪತಿ ಗೌಡ, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು ಮತ್ತು ಕಾರ್ಯದರ್ಶಿ ರಮೇಶ್ ಮಯ್ಯ ಉಜಿರೆ ಇವರು ಜೊತೆಗಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟ ಉದ್ಘಾಟನೆ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ವರ್ಣಿಕ ಎಚ್. ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

Suddi Udaya

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆರವರ ಎಲ್ ಬಿಡಬ್ಲೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ಪುಸ್ತಕ ಬಿಡುಗಡೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!