24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಉಜಿರೆಯಲ್ಲಿ ಫೆಬ್ರವರಿ 03, 04 ಮತ್ತು 05ರಂದು ನಡೆಯಲಿರುವ ದ ಕ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರ ಸಹಕಾರ ಲಭ್ಯವಾಗಿ ಸಮ್ಮೇಳನವು ಎಲ್ಲರ ಸಮ್ಮೇಳನವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸುತ್ತಾ, ಈ ಸಮ್ಮೇಳನವು ಬೆಳ್ತಂಗಡಿ ತಾಲೂಕಿನಲ್ಲಿ ಜರಗುತ್ತಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ. ಬಹಳಷ್ಟು ವಿಚಾರಗಳು ಸಮ್ಮೇಳನದಲ್ಲಿ ಚರ್ಚೆಯಾಗಲಿದ್ದು, ನಾಡಿನ ಭಾಷೆ , ಸಂಸ್ಕೃತಿ ಮತ್ತು ಸಾಹಿತ್ಯಿಕ ವಾತಾವರಣ ಬೆಳೆಸುವಲ್ಲಿ ಒಳ್ಳೆಯ ಪ್ರೇರಣೆ ಮತ್ತು ಮಾರ್ಗದರ್ಶನ ನೀಡುವಂತಾಗಲಿ ಎಂದು ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಆಶಿಸಿದರು‌.
ಮಾನ್ಯ ಶಾಸಕರು ಜಿಲ್ಲಾ ಸಮ್ಮೇಳನದ ಸ್ವಾಗತ ಸಮಿತಿ ಮತ್ತು ಸಂಯೋಜನಾ ಸಮಿತಿಯ ಸದಸ್ಯರ ಭೇಟಿ ಸಂದರ್ಭದಲ್ಲಿ ಸಮ್ಮೇಳನದ ರೂಪುರೇಷೆಗಳ ಬಗ್ಗೆ ವಿಚಾರ ವಿನಿಮಯ ನಡೆಸುವ ಸಂದರ್ಭದಲ್ಲಿ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದರು.

ಮಾನ್ಯ ಶಾಸಕರು ಸಮ್ಮೇಳನದ ಸಂಯೋಜನಾ ಸಮಿತಿಯ ಗೌರವ ಕಾರ್ಯಾಧ್ಯಕ್ಷರೂ ಆಗಿರುವುದರಿಂದ, ಅವರಿಗೆ ಆಮಂತ್ರಣ ಪತ್ರಿಕೆ ನೀಡುವುದರೊಂದಿಗೆ ಸಮ್ಮೇಳನದ ಕೆಲಸ ಕಾರ್ಯಗಳ ಪ್ರಗತಿಯ ಬಗ್ಗೆಯೂ ಅವರೊಂದಿಗೆ ಚರ್ಚಿಸಲಾಯಿತು.

ಸಮ್ಮೇಳನದ ಸಂಯೋಜನಾ ಸಮಿತಿಯು ಮಾನ್ಯ ಶಾಸಕರ ಭೇಟಿಯನ್ನು ಅವರ ಮನೆಯಲ್ಲಿ, ಉಜಿರೆ ಗ್ರಾಮ ಪಂಚಾಯತ್ ಆಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿಯವರ ನೇತೃತ್ವದಲ್ಲಿ ಮಾಡಿದ್ದು , ಜಿಲ್ಲಾ ಕ ಸಾ ಪ ದ ಅಧ್ಯಕ್ಷರಾದ ಡಾ. ಎಂ ಪಿ ಶ್ರೀನಾಥ, ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ರಾಜೇಶ್ವರಿ, ಬೆಳ್ತಂಗಡಿ ತಾಲೂಕು ಕ ಸಾ ಪ ಅಧ್ಯಕ್ಷರಾದ ಡಿ. ಯದುಪತಿ ಗೌಡ, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು ಮತ್ತು ಕಾರ್ಯದರ್ಶಿ ರಮೇಶ್ ಮಯ್ಯ ಉಜಿರೆ ಇವರು ಜೊತೆಗಿದ್ದರು.

Related posts

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya
error: Content is protected !!