28.1 C
ಪುತ್ತೂರು, ಬೆಳ್ತಂಗಡಿ
September 10, 2026
ಜಿಲ್ಲಾ ಸುದ್ದಿ

ರಾಜ್ಯ ಪ್ರಶಸ್ತಿ ಗೆ ಪತ್ರಕರ್ತ ಪ್ರದೀಪ್ ಮರೋಡಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮೈಸೂರು ದಿಗಂತ’ರಾಜ್ಯ ಪ್ರಶಸ್ತಿಗೆ ‘ಪ್ರಜಾವಾಣಿ’ ದಿನಪತ್ರಿಕೆಯ ಪತ್ರಕರ್ತ ಪ್ರದೀಶ್‌ ಮರೋಡಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಪರಿಗಣಿಸಿ ನಾಲ್ಕು ವರ್ಷಗಳ (2019, 2020, 2021 ಮತ್ತು 2022) ರಾಜ್ಯದ ವಿವಿಧ ಪತ್ರಕರ್ತರನ್ನು ಮಾಧ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತರ ಸಚಿವರು ಹಾಗೂ ಗಣ್ಯರನ್ನು ಆಹ್ವಾನಿಸಿ ಶೀಘ್ರದಲ್ಲೇ ಸಾಧಕರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ ಕೆ. ಅವರು ತಿಳಿಸಿದ್ದಾರೆ.

ಅತ್ಯುತ್ತಮ ಮಾನವೀಯ ಸಮಸ್ಯೆಯ ಲೇಖನಕ್ಕೆ ನೀಡಲಾಗುವ 2020ನೇ ಸಾಲಿನ ‘ಮೈಸೂರು ದಿಗಂತ’ ದತ್ತಿ ಪ್ರಶಸ್ತಿಗೆ ಬೆಳ್ತಂಗಡಿ ತಾಲ್ಲೂಕಿನ ಮರೋಡಿ ಗ್ರಾಮದ ಹಾರೊದ್ದು ನಿವಾಸಿ ಪ್ರದೀಶ್‌ ಮರೋಡಿ ಆಯ್ಕೆಯಾಗಿದ್ದಾರೆ.

2020ರ ಜೂನ್‌ ತಿಂಗಳಲ್ಲಿ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ಕೇಳುತ್ತಿಲ್ಲ ಮಲೆಮಕ್ಕಳ ಅಳಲು’ ಲೇಖನವು ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಮೈಸೂರು ದಿಗಂತ ಪತ್ರಿಕೆ ಸ್ಥಾಪಿಸಿರುವ ‘ಮೈಸೂರು ದಿಗಂತ’ ದತ್ತಿ ಪ್ರಶಸ್ತಿಯು ₹ 10,000 ನಗದು ಬಹುಮಾನ, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಮಾಧ್ಯಮ ಕ್ಷೇತ್ರದಲ್ಲಿ ಒಂದೂವರೆ ದಶಕದಿಂದ ಕರ್ತವ್ಯ ನಿರ್ವಹಿಸುತ್ತಿರುವ ಪ್ರದೀಶ್‌ ಮರೋಡಿ ಅವರು ಬೆಳ್ತಂಗಡಿಯ ಸುದ್ದಿಬಿಡುಗಡೆ ವರದಿಗಾರರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಕೆಲ ವರ್ಷ ಟಿವಿ ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2013ರಿಂದ ಪ್ರಜಾವಾಣಿ ಪತ್ರಿಕೆಯಲ್ಲಿ ಮೈಸೂರಿನಲ್ಲಿ, ಪ್ರಸ್ತುತ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ 2020ನೇ ಸಾಲಿನ ಪ್ರತಿಷ್ಠಿತ ‘ಪ.ಗೋ. ಪ್ರಶಸ್ತಿ’ಗೂ ಭಾಜನರಾಗಿದ್ದರು.

Related posts

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya
error: Content is protected !!