April 1, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

ವೇಣೂರು :ವೇಣೂರುಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ.19 ರಿಂದ ಪ್ರಾರಂಭಗೊಂಡು ಮಾ.1 ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೆರವಣಿಗಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರಿಂದ ಚಾಲನೆ ದೊರೆಯಿತು.

ಹಸಿರುವಾಣಿ ಹೊರೆಕಾಣಿಕೆ ದೇವರಿಗೆ ಸಮರ್ಪಣೆಯಾಗಲಿದ್ದು. ಮೆರವಣಿಗೆಯಲ್ಲಿ ಚೆಂಡೆ, ಮದ್ದಳೆ, ಕೊಂಬು, ಭಜನೆ ಹಾಗೂ ವಿವಿಧ ವೇಷ ಭೂಷಣ ಮತ್ತು ಸುಡುಮದ್ದು ಪ್ರದರ್ಶನದೊಂದಿಗೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆಯಲ್ಲಿ ಸಾಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಪೂಂಜ, ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಯನ್.ಪುರುಷೋತ್ತಮ ರಾವ್,ಬ್ರಹ್ಮಕಲಶೋತ್ಸವದ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞನಾರಾಯಣ ಭಟ್, ಹಾಗೂ ಸಮಿತಿಯ ಸರ್ವಸದಸ್ಯರು, ಊರ,ಪರವೂರ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya
error: Content is protected !!