25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ನಾಗಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಫೆ. ೨೧ ರಿಂದ ಪ್ರಾರಂಭಗೊಂಡು ಫೆ.೨೮ ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು


ಫೆ. ೨೧ ರಂದು ಬೆಳಿಗ್ಗೆ ಜ್ಯೋತಿಷಿ, ಹಿರಿಯ ವೈದಿಕರು ರಾಮಕೃಷ್ಣ ಭಟ್ ಖಾಡಿಲ್ಕರ್ ರವರು ಭೋಜನಾಲಯ ಉದ್ಘಾಟನೆಯನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಾಲಯದ ಉದ್ಘಾಟನೆಯನ್ನು ಅಡ್ಕಾಡಿ ಶ್ರೀಕರ ರಾವ್ ನೆರವೇರಿಸಿದರು. ಸಂಜೆ ತಂತ್ರಿವರ್ಯರಿಗೆ ಪೂರ್ಣಕುಂಭ ಸ್ವಾಗತಿಸಿ, ವೈದಿಕ ಕಾರ್ಯಕ್ರಮಗಳಾದ ಆಚಾರ್ಯಾದಿ ಋತ್ವಿಕ್ ವರಣ, ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ದಿಶಾ ಬಲಿ ನಡೆಯಿತು.
ಪಡ್ಡಾಯಿಬೆಟ್ಟು ಮಾಯಿಲಪ್ಪ ಗೌಡ ರಿಂದ ಉಗ್ರಾಣಕ್ಕೆ ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಬಿ. ದಿನೇಶ ಮಯ್ಯ ದಣಿಲ, ಅನುವಂಶಿಕ ಆಡಳಿತ ಮೊಕ್ತೇಸರರು ರಾಜಗೋಪಾಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ವಾಮನ ತಾಮ್ಹಣ್‌ಕರ್, ದೇವಸ್ಥಾನ ಅಭಿವೃದ್ಧಿ ಅಮಿತಿ ಅಧ್ಯಕ್ಷ ಗಂಗಾಧರ ಕುಲಾಲ್ ಉಡ್ಯೇರ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಸುಂದರ ಗೌಡ ಉಡ್ಯೇರ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಪದ್ಮಯ್ಯ ಗೌಡ, ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಕೃಷ್ಣಪ್ಪ ಕುಲಾಲ್, ಅರ್ಚಕ ರಾಮಕೃಷ್ಣ ರಾವ್, ಶ್ರೀ ಗಣೇಶ್ ಭಿಡೆ, ಕೋಶಾಧಿಕಾರಿ ಶ್ರೀರಂಗ ದಾಮ್ಲೆ, ಬ್ರಹ್ಮಕಲಶೋತ್ಸವ ಸಮಿತಿಯ, ಜೀರ್ಣೋದ್ಧಾರ ಸಮಿತಿಯ ಸರ್ವಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya
error: Content is protected !!