25.7 C
ಪುತ್ತೂರು, ಬೆಳ್ತಂಗಡಿ
May 17, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

ಮಂಗಳೂರು: ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ತಾಂತ್ರಿಕ ವಿಭಾಗದ ಸಹಾಯಕ ಎಂಜಿನಿಯರ್ ರೂಪಾ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಫೆ. 21ರಂದು ಸಿಕ್ಕಿಬಿದ್ದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲ್ಲೂಕಿನ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ಸಭಾಂಗಣ ನಿರ್ಮಾಣ ಕಾಮಗಾರಿಯೊಂದರ ಅಂತಿಮ ಬಿಲ್ ಪಾವತಿಗೆ ಸಂಬಂಧಿಸಿದ ಕಡತಕ್ಕೆ ಸಹಿ ಹಾಕಲು ರೂಪಾ 10 ಸಾವಿರ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ತಾಲ್ಲೂಕಿನ ಗುರಿಪಲ್ಲದ ಕನ್ಯಾಡಿ ಗ್ರಾಮದ ಗುತ್ತಿಗೆದಾರರೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

‘ದೂರುದಾರರು 2 ಸಾವಿರವನ್ನು ರೂಪಾ ಅವರಿಗೆ ಮೊದಲೇ ನೀಡಿದ್ದರು. ರೂಪಾ ಅವರು ಫೆ.19ರಂದು ಸೋಮವಾರ ದೂರುದಾರರಿಂದ 8 ಸಾವಿರ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಅವರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಂಡಿದ್ದೇವೆ’ ಎಂದು ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಿ.ಎ.ಸೈಮನ್ ಮಾಹಿತಿ ನೀಡಿದಾರೆ.
ಲೋಕಾಯುಕ್ತ ಪೊಲೀಸ್ ಡಿವೈಎಸ್‌ಪಿಗಳಾದ ಕಲಾವತಿ ಕೆ., ಚಲುವರಾಜು ಬಿ., ಇನ್‌ಸ್ಪೆಕ್ಟರ್ ಅಮಾನುಲ್ಲ ಎ. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya
error: Content is protected !!