25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

ಬೆಳ್ತಂಗಡಿ : ದಿನದಿಂದ ದಿನೇ ಬಿಸಿಲಿನ ತಾಪ ಹೆಚ್ಚಾಗುತಿದ್ದು ಅಲ್ಲಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಫೆ 26 ಮಧ್ಯಾಹ್ನ ಗುಡ್ಡಕ್ಕೆ ಬೆಂಕಿ ಬಿದಿದ್ದು ಸಮೀಪದ  ರಬ್ಬರ್ ತೋಟಕ್ಕೂ ಬೆಂಕಿ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ

ಇಲಾಖೆಗೆ ಮಾಹಿತಿ ನೀಡಿದರು.ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ನಂದಿಸುವ ಕಾರ್ಯ ಮಾಡಿದರೂ ಬೆಂಕಿ ಅವಾಗಲೇಎರಡು ಎಕರೆ ರಬ್ಬರ್ ಗುಡ್ಡ ಸೇರಿದಂತೆ 5 ಎಕರೆಯಷ್ಟು ಗುಡ್ಡದಲ್ಲಿ ಬೆಂಕಿ ವ್ಯಾಪಿಸಿದೆ.ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಈಗಾಗಲೇ ಎರಡು  ಅಗ್ನಿಶಾಮಕ ಇಲಾಖೆಯ ತಂಡಗಳು, ಲಾಯಿಲ ಗ್ರಾಮ 

ಪಂಚಾಯತ್ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶತಪ್ರಯತ್ನ ಮಾಡುತಿದ್ದಾರೆ.ಕಳೆದ ವಾರವಷ್ಟೇ ಲಾಯಿಲ ಗ್ರಾಮದ ಪಡ್ಲಾಡಿ ಎಂಬಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಅಗ್ನಿಶಾಮಕ ಇಲಾಖೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿತ್ತು. ಸ್ಥಳೀಯರ ಸಮಯಪ್ರಜ್ಙೆಯಿಂದ ದೊಡ್ಡ ಅನಾಹುತ ತಪ್ಪಿತ್ತು.

Related posts

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!