25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

ಬೆಳ್ತಂಗಡಿ: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ವಿಶ್ವಮಟ್ಟದ 5ನೇ ಸ್ಥಾನಿಕ ಬ್ರಾಹ್ಮಣ ಸಮಾವೇಶವನ್ನು ಮಾ. 4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು.


ಹೊರನಾಡು ಆಧಿಶಕ್ಯಾತ್ಮಕ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತರಾದ ಭೀಮೇಶ್ವರ ಜೋಷಿ ಶುಭಾ ಶಂಸನೆ ಗೈದರು, ಸಭಾಧ್ಯಕ್ಷತೆಯನ್ನು ಸ್ಥಾನಿಕ ಬ್ರಾಹ್ಮಣ ಮಹಾಂಡಲ ಅಧ್ಯಕ್ಷ ಎಂ. ದೇವಾನಂದ ಭಟ್ ವಹಿಸಿದ್ದರು. ಸಮ್ಮೇಳನ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಅಧ್ಯಕ್ಷ ಪಿ. ರಾಧಾಕೃಷ್ಣ ರಾವ್‌ ಧರ್ಮಸ್ಥಳ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಪಂಜ ಭಾಗವಹಿಸಿದ್ದರು.
ಸಮಾವೇಶದ ಗೌರವ ಅಧ್ಯಕ್ಷ ಎಸ್. ಕೆ. ಜಗನ್ನಿವಾಸ ರಾವ್ ಪುತ್ತೂರು, ಸಂಚಾಲಕ ಪಿ. ಲಕ್ಷ್ಮೀನಾರಾಯಣ ರಾವ್, ಕಾರ್ಯದರ್ಶಿ ಬಿ. ಕೆ. ಧನಂಜಯ ರಾವ್, ಗೌರವ ಸಲಹೆಗಾರ ಅರುಣ್ ಕುಮಾರ್ ಎಂ. ಎಸ್, ದಿನೇಶ್ ಕುಮಾರ್ ಎಂ. ಎಸ್., ರೇಖಾ ಸುಧೀರ್ ರಾವ್, ಕೋಶಾಧಿಕಾರಿ ಮಿಥುನ್ ರಾವ್, ಉಪಾಧ್ಯಕ್ಷರುಗಳಾದ ಸುಬ್ರಹ್ಮಣ್ಯ ರಾವ್, ಪ್ರಶಾಂತ್, ಶಿವಾನಂದ ರಾವ್, ಮಹಿಳಾ ವೇದಿಕೆ ಅಧ್ಯಕ್ಷೆ ಮಮತ ರಾವ್, ಕಾರ್ಯದರ್ಶಿ ನಿಶಾ ವಿಶ್ವನಾಥ್, ಯುವ ವೇದಿಕೆ ಅಧ್ಯಕ್ಷ ಪವನ್ ರಾವ್, ಕಾರ್ಯದರ್ಶಿ ನಿತಿನ್ ರಾವ್, 18 ಮಹಾ ಮಂಡಲದ ಪದಾಧಿಕಾರಿಗಳು ಸದಸ್ಯರು, ವಲಯಗಳ ಪದಾಧಿಕಾರಿಗಳು, ಸದಸ್ಯರು, ಸ್ಥಾನಿಕ ಬಂಧುಗಳು ಹಾಜರಿದ್ದರು. ಸಮಾಜ ಸೇವೆ ಗೈದ ಸವೋ೯ತ್ತಮ ರಾವ್‌ ಚಿಟ್ಟಾಡಿ ʻಸ್ಥಾನಿಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ 18 ಸಭಾ ಸಾಧಕರನ್ನು ಸನ್ಮಾನಿಸಲಾಯಿತು.

Related posts

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮೂರು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya
error: Content is protected !!