July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

ಬೆಳ್ತಂಗಡಿ : ಅಕ್ರಮ ಸಕ್ರಮದ ಅರ್ಜಿ ವಿಲೇವಾರಿ ಮಾಡಲು 45 ಸಾವಿರ ರೂ. ಲಂಚ ಪಡೆದಿದ್ದ ಗ್ರಾಮ ಕರಣಿಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ 4 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 70ಸಾವಿರ ರೂ. ದಂಡ ವಿಧಿಸಿದೆ.

ಈ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಸೇವೆ ಸಲ್ಲಿಸಿದ್ದ, ನಂತರ ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಕರಣಿಕರಾಗಿ ವಗಾ೯ವಣೆಗೊಂಡಿದ್ದ ಮಹೇಶ್ ಶಿಕ್ಷೆಗೆ ಒಳಗಾದ ಆರೋಪಿಸಿಯಾಗಿದ್ದಾರೆ.‌
‌‌ಎಸ್.ಮಹೇಶ್ ಅಕ್ರಮ ಸಕ್ರಮದ ಅರ್ಜಿಯ ವಿಲೇವಾರಿಗೆ, ಮಂಡೆಕೋಲು ನಿವಾಸಿ ಗೋಪಾಲಕೃಷ್ಣ ಅವರಿಂದ 60 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದರು. 2016ರ ಜೂ.7 ರಂದು 45,000 ರೂ. ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಮಹೇಶ್ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದರು. ಈ ಸಂಬಂಧ ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಜೈಲು ಶಿಕ್ಷೆ ವಿಧಿಸಿ ಮಾ.2 ರಂದು ತೀರ್ಪು ನೀಡಿದ್ದಾರೆ. ಅಪರಾಧಿ ದಂಡ ಕಟ್ಟಲು ವಿಫಲನಾದರೆ ಮತ್ತೆ 8 ತಿಂಗಳ ಕಾಲ ಸಾದಾ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪುನಲ್ಲಿ‌ ತಿಳಿಸಲಾಗಿದೆ.
ಪೊಲೀಸ್ ನಿರೀಕ್ಷ ದಿನಕರ ಶೆಟ್ಟಿ ತನಿಖೆ ನಡೆಸಿದ್ದರು. ಪೊಲೀಸ್ ನಿರೀಕ್ಷಕ ಯೋಗೀಶ್ ಕುಮಾರ್ ತನಿಖೆಯನ್ನು ಮುಂದುವರಿಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Related posts

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ: ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya
error: Content is protected !!