September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದವಾದ ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿ
ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ
ಅರಣ್ಯ ನಾಶವಾಗಿದೆ.


ಚಾರ್ಮಾಡಿ ಘಾಟಿಗೆ ಹೊಂದಿಕೊಂಡಂತಿರುವ
ಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ಹೊತ್ತಿ ಉರಿಯುತ್ತಿರುವ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯ ಸುಟ್ಟು ಕರಕಲಾಗುತ್ತಿದೆ. ಬೆಂಕಿಯ ಕೆನ್ನಾಲಿಗೆಗೆ ಅರಣ್ಯವಲ್ಲದೆ ಪ್ರಾಣಿ-ಪಕ್ಷಿಗಳ ಸಾವು‌ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ದೌಡಾಯಿಸಿ ದ್ದು, , ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರ ಸಾಥ್ ನೀಡಿದ್ದಾರೆ.
ಬೆಂಕಿ ಕಾಣಿಸಿಕೊಂಡಿದ್ದು, ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಇದರಿಂದಾಗಿ ಬೆಂಕಿ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸುವ ಸಾಧ್ಯತೆ ಇದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.

Related posts

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya
error: Content is protected !!