April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಮಹಿಳಾ ವೃಂದ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ.6ರಂದುಪ್ರವಾಸಿ ಮಂದಿರದ ಹತ್ತಿರ ಉದ್ಘಾಟನೆಗೊಳ್ಳಲಿದೆ.


ನೂತನ ಕಟ್ಟಡವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹರೀಶ್ ಪೂಂಜಾ ಉದ್ಘಾಟಿಸಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಬೆಳ್ತಂಗಡಿ ಮಹಿಳಾ ವೃಂದ ಅಧ್ಯಕ್ಷರಾದ ಶ್ರೀಮತಿ ಆಶಾ ಸತೀಶ್ ವಹಿಸಲಿದ್ದರೆ. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ. ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್. ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಜನಿ ಕುಡ್ವ . ಉಪಾಧ್ಯಕ್ಷರಾದ ಜಯಾನಂದ ಗೌಡ. ಗುರುವಾಯನಕೆರೆ ನವಶಕ್ತಿ ಬರೋಡ ಉದ್ಯಮಿ ಶಶಿಧರ ಶೆಟ್ಟಿ. ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕರಾದ ಮೋಹನ್ ಕುಮಾರ್. ಧರ್ಮಸ್ಥಳ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಆನಂದ್ ಸುವರ್ಣ. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ. ಬೆಳ್ತಂಗಡಿ ಮಹಿಳಾ ವೃಂದ ಸ್ಥಾಪಕ ಕಾರ್ಯದರ್ಶಿ ಶಶಿಕಲಾ ಪಿ ರಾವ್. ಮುಂತಾದವರು ಉಪಸ್ಥಿರುವರು.. ಈ ಸಮಾರಂಭದಲ್ಲಿ ಬೆಳ್ತಂಗಡಿ ಮಹಿಳಾ ವೃಂದ ಪೂರ್ವ ಅಧ್ಯಕ್ಷರಾದ ಜಯಶ್ರೀ ಪಿ ನಾಯಕ್ ನಗರ ಪಂಚಾಯತ್ ಬೆಳ್ತಂಗಡಿಯ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ ಇವರನ್ನು ಸನ್ಮಾನಿಸಲಿದ್ದಾರೆ. ಎಂದು ಬೆಳ್ತಂಗಡಿ ಮಹಿಳಾ ವೃಂದ ಅಧ್ಯಕ್ಷರಾದ ಶ್ರೀಮತಿ ಆಶಾ ಸತೀಶ್ ಕಾರ್ಯದರ್ಶಿ ಶ್ರೀಮತಿ ವೀಣಾ ವಿನೋದ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!