ಬೆಳ್ತಂಗಡಿ: ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದವಾದ ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿ
ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ
ಅರಣ್ಯ ನಾಶವಾಗಿದೆ.
ಚಾರ್ಮಾಡಿ ಘಾಟಿಗೆ ಹೊಂದಿಕೊಂಡಂತಿರುವ
ಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ಹೊತ್ತಿ ಉರಿಯುತ್ತಿರುವ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯ ಸುಟ್ಟು ಕರಕಲಾಗುತ್ತಿದೆ. ಬೆಂಕಿಯ ಕೆನ್ನಾಲಿಗೆಗೆ ಅರಣ್ಯವಲ್ಲದೆ ಪ್ರಾಣಿ-ಪಕ್ಷಿಗಳ ಸಾವು ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ದೌಡಾಯಿಸಿ ದ್ದು, , ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರ ಸಾಥ್ ನೀಡಿದ್ದಾರೆ.
ಬೆಂಕಿ ಕಾಣಿಸಿಕೊಂಡಿದ್ದು, ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಇದರಿಂದಾಗಿ ಬೆಂಕಿ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸುವ ಸಾಧ್ಯತೆ ಇದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.