24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಐ.ಬಿ.ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಹಿಳಾ ವೃಂದದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.6ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ನೂತನ ಕಟ್ಟಡ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು.

ಮಹಿಳಾ ವೃಂದದ ಅಧ್ಯಕ್ಷೆ ಶ್ರೀಮತಿ ಆಶಾ ಸತೀಶ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಉಜಿರೆ ಉದ್ಯಮಿ ಮೋಹನ್ ಕುಮಾರ್, ಧರ್ಮಸ್ಥಳ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ, ಮಹಿಳಾ ವೃಂದದ ಸ್ಥಾಪಕ ಕಾರ್ಯದರ್ಶಿ ಶಶಿಕಲಾ ಪಿ. ರಾವ್, ಕಾರ್ಯದರ್ಶಿ ವೀಣಾವಿನೋದ್ ಕುಮಾರ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಹಿಳಾ ವೃಂದದ ಪೂರ್ವಾಧ್ಯಕ್ಷೆ ಜಯಶ್ರೀ ಪಿ ನಾಯಕ್ ಹಾಗೂ ನ.ಪಂ. ಸದಸ್ಯ ಶರತ್ ಶೆಟ್ಟಿ ಯವರನ್ನು ಸನ್ಮಾನಿಸಲಾಯಿತು.

ಸಂಧ್ಯಾ ಪ್ರಾರ್ಥಿಸಿ, ರಶ್ಮಿ ಪಟವರ್ಧನ್ ಸ್ವಾಗತಿಸಿ, ಹೇಮಾವತಿ ಕಾರ್ಯಕ್ರಮ ನಿರೂಪಿಸಿ,ಉಮಾ ಪಿ ರಾವ್ ಪ್ರಾಸ್ತಾವಿಕ ಮಾತನಾಡಿದರು.

Related posts

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!