29.5 C
ಪುತ್ತೂರು, ಬೆಳ್ತಂಗಡಿ
April 4, 2025
ಸಾಧಕರು

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರು
ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿ ಗೆ ಆಯ್ಕೆ

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆ ಯ ಕಾಯ೯ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ
ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಪ್ರಶಸ್ತಿ ಗೆ ಆಯ್ಕೆ ಯಾಗಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಏಕ್‌ ಭಾರತ್’ ಕಾಯ೯ಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಗೆ ಕಾಂಚೋಡು ಅವರು ಪಾತ್ರರಾಗಿದ್ದಾರೆ.ಅವರು ಭಾರತೀಯ ಭೂ ಸೇನೆಯಲ್ಲಿ ಜಮ್ಮು ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.‌

ಸೇನಾ ನಿವೃತ್ತಿಯ ನಂತರ ತನ್ನೂರಿಗೆ ಬಂದು ಬೆಳ್ತಂಗಡಿ ತಾಲೂಕು ಉಜಿರೆ ಯಲ್ಲಿ ನೆಲೆಸಿ, “ರವಿ ಟ್ರೇಡರ್ಸ್” ಎಂಬ ಉದ್ದಿಮೆ ಸ್ಥಾಪಿಸಿ ಹತ್ತಾರು ಯುವಕರಿಗೆ ಜೀವನೋಪಾಯದ ಹಾದಿಯನ್ನು ಸೃಷ್ಟಿಸುತ್ತಾ ಸೇನೆಗೆ ಸೇರಲು ಬಯಸುವ ಯುವಕರಿಗೆ ಉಚಿತ ಮಾಹಿತಿ ನೀಡುತ್ತಾ ಬರುತ್ತಿದ್ದಾರೆ.
ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ, ಕೃಷಿ ಕ್ಷೇತ್ರ ದಲ್ಲಿ ವೈಜ್ಞಾನಿಕವಾಗಿ, ಉತ್ತಮ ಆದಾಯ ಪಡೆಯುವ ಆಧುನಿಕ ತಂತ್ರಜ್ಞಾನ ಗಳೊಂದಿಗೆ ಪ್ರಕೃತಿಗೆ ತೊಂದರೆ ಯಾಗದಂತೆ (ಜಲ, ನೆಲ ಉಳಿಸಿ ) ಸಾವಯವ ಕೃಷಿಯನ್ನು ಮಾಡುತ್ತಾ, ಕಂಗು, ತೆಂಗು, ಬಾಳೆ ಕೃಷಿಗಳೊಂದಿಗೆ ಎಲ್ಹೋಟಿಕ್ (exotic) ಹಣ್ಣುಗಳನ್ನು ಬೆಳೆಯುತ್ತಾ, ಪ್ರಾಕೃತಿಕವಾಗಿ ಪ್ರಕೃತಿ ಸಹಜಕ್ರಿಯೆ, ಪರಾಗ ಸ್ಪರ್ಶಕ್ಕೆ ಪೂರಕ ಜೇನುಸಾಕಣೆ ಮಾಡುತ್ತಾ ಹತ್ತು ಹಲವು ಆಸಕ್ತ ಕೃಷಿಕರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಸರ್ಕಾರ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಮಾ.15ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೋಪಾಲಕೃಷ್ಣ ಕಾಂಚೋಡು ಅವರಿಗೆ “ಕೃಷಿಕ ರತ್ನ” ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಸಚಿವರುಗಳಾದ ಮುರುಗೇಶ್ ನಿರಾಣಿ, ಡಾ. ಸುಧಾಕರ್, ಕೆ.ಸಿ ನಾರಾಯಣ ಗೌಡ ಮೊದಲಾದವರು ಉಪಸ್ಥಿತರಿರುವರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya
error: Content is protected !!