27.5 C
ಪುತ್ತೂರು, ಬೆಳ್ತಂಗಡಿ
April 3, 2025
ತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

ಬೆಳ್ತಂಗಡಿ: ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ನಿನ್ನೆ ಮಾ.12ರಂದು ನಡೆದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮೋದಿಯವರಿಂದ ಭೇಷ್ ಎನಿಸಿಕೊಂಡಿದ್ದಾರೆ.

ಮದ್ದೂರಿನ ಗೆಜ್ಜಲಗೆರೆಯಲ್ಲಿ ಭಾನು ವಾರ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಮೋದಿಯವರು ಹಿಂದಿಯಲ್ಲಿ ಭಾಷಣ ಮಾಡಿದರು. ಹೆಚ್ಚಾಗಿ ಎಲ್ಲಿಯೂ ಅವರ ಭಾಷಣವನ್ನು ಸ್ಥಳೀಯ ಭಾಷೆಗೆ ಭಾಷಾಂತರ ಮಾಡುವ ಪದ್ಧತಿ ಇರುವುದಿಲ್ಲ. ಆದರೆ ಮಂಡ್ಯದಲ್ಲಿ ಭಾಷಾಂತರಿಸುವ ಅನಿವಾರ್ಯತೆ ಉಂಟಾಯಿತು. ಭಾಷಾಂತರಕ್ಕೆ ಆಯ್ಕೆ ಮಾಡಿದ್ದು ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಈ ಹಿಂದೆ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹಾಗೂ ಕೆಲ ಸಮಯದ ಹಿಂದೆ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಹಿಂದಿ ಭಾಷಣವನ್ನು ಸಮರ್ಥವಾಗಿ ಕನ್ನಡೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೋದಿ ಅವರ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸುವ ಭಾಗ್ಯ ಅವರದ್ದಾಯಿತು.

ಸುಮಾರು ಅರ್ಧ ಗಂಟೆ ಸಹಸ್ರಾರು ಸಭಿಕರ ಮುಂದೆ ಪ್ರಧಾನಿ ಸಮಕ್ಷಮದಲ್ಲಿ ಮೊದಲ ಬಾರಿಗೆ ಪ್ರತಾಪಸಿಂಹ ನಾಯಕರು ನಿರರ್ಗಳವಾಗಿ ಹಿಂದಿ ಭಾಷಣದ ಯಥಾವತ್ ತರ್ಜುಮೆ ಮಾಡಿ ಸೈ ಎನಿಸಿಕೊಂಡರು.

ಸಭೆಯ ಬಳಿಕ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರತಾಪಸಿಂಹ ನಾಯಕ್‌ ಅವರ ಬೆನ್ನು ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya
error: Content is protected !!