24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

ಮುಂಡಾಜೆ : ಕೂಲಿ ಕೆಲಸಕ್ಕೆಂದು ಹೋದ ಮಹಿಳೆಯೋವ೯ರು ಕುಸಿದು ಬಿದ್ದು, ಪ್ರಜ್ಞೆ ತಪ್ಪಿದವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದ ದಾಖಲಿಸಿ, ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.12ರಂದು ವರದಿಯಾಗಿದೆ.


ಮುಂಡಾಜೆ ಗ್ರಾಮದ ಸನ್ಯಾಸಿಕಟ್ಟೆ ನಿವಾಸಿ ಪಾವ೯ತಿ (55ವ) ಈ ದುಘ೯ಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಅವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಗಣೇಶ ಎಂಬವರ ಮನೆಗೆ ಕೂಲಿ ಕೆಲಸಕ್ಕೆಂದು ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋಗಿದ್ದರು. ಅಲ್ಲಿ ಕೆಲಸ ಮಾಡುತ್ತಿರುವ ಸಮಯ ಸಂಜೆ ಒಮ್ಮೆಲೇ ಕುಸಿದು ಬಿದ್ದು, ಪ್ರಜ್ಞೆಯನ್ನು ಕಳೆದುಕೊಂಡರು. ಅವರನ್ನು ಆರೈಕೆ ಮಾಡಿ ಕೂಡಲೇ ಚಿಕಿತ್ಸೆಗೆ ಬಗ್ಗೆ ಕಕ್ಕಿಂಜೆ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದಿದ್ದುದರಿಂದ, ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿನ ವೈದ್ಯರ ಸಲಹೆಯಂತೆ ಕೂಡಲೇ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪುತ್ರಿ ಪುಷ್ಪಾ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya
error: Content is protected !!