25.3 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

ಬೆಳ್ತಂಗಡಿ: ರಾಜ್ಯ ಸರಕಾರದ 2018 ನೇ ಸಾಲಿನ, ಪ್ರತಿಷ್ಠಿತ ಮೊಹರೆ ಹಣಮಂತರಾಯ ಪ್ರಶಸ್ತಿಗೆ ಆಯ್ಕೆಯಾಗಿರುವ ಸುದ್ದಿ ಬಿಡುಗಡೆ ಪ್ರಧಾನ ಸಂಪಾದಕ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರವರಿಗೆ ಮಾ.13ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.


ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಕಂದಾಯ ಸಚಿವ ಆರ್.ಅಶೋಕ್,ಮಾಜಿ ಸಂಸದ ವಿಜಯ ಸಂಕೇಶ್ವರ, ಪಬ್ಲಿಕ್ ಟಿವಿಯ ಮುಖ್ಯಸ್ಥ ಹೆಚ್.ಆರ್.ರಂಗನಾಥ್, ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆ ಮಾತ್ರವಲ್ಲದೆ ಮಾಹಿತಿ, ಸುದ್ದಿ ವೆಬ್‌ಸೈಟ್, ಸುದ್ದಿ ನ್ಯೂಸ್ ಚಾನೆಲ್ ಜೊತೆಗೆ ಬಲಾತ್ಕಾರದ ಬಂದ್, ಸಾಮಾಜಿಕ ಜಾಲತಾಣಗಳ ದುರುಪಯೋಗ, ಲಂಚ-ಭ್ರಷ್ಟಾಚಾರದ ವಿರುದ್ಧ ಜನಾಂದೋಲನಗಳ ಮೂಲಕ ಜನಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿರುವ ಡಾ.ಯು.ಪಿ.ಶಿವಾನಂದ ಅವರು, ಕೊರೋನಾ ಸಂದರ್ಭದ ವಾರಾಂತ್ಯ ಕರ್ಪ್ಯೂ ವಿರುದ್ಧ ಜಾಗೃತಿ ಮೂಡಿಸುವಲ್ಲಿಯೂ ಯಶಸ್ವಿಯಾಗಿ ರಾಜ್ಯ ಮಟ್ಟದಲ್ಲಿ ಶ್ಲಾಘನೆಗೆ ಪಾತ್ರರಾಗಿದ್ದಾರೆ.ಇತ್ತೀಚೆಗಷ್ಟೆ ಪುತ್ತೂರುನಲ್ಲಿ ಸಸ್ಯ ಜಾತ್ರೆಯನ್ನು ಯಶಸ್ವಿಯಾಗಿ ಸಂಘಟಿಸಿದ್ದರು. ಶಿಕ್ಷಣ,ಉದ್ಯೋಗ ಮತ್ತು ಕೃಷಿ ಮಾಹಿತಿ ಕೇಂದ್ರವನ್ನು ಆರಂಭಿಸಿರುವುದು ಸೇರಿದಂತೆ ಹಲವು ಪ್ರಥಮಗಳಿಗೆ ನಾಂದಿ ಹಾಡಿರುವ ಡಾ.ಯು.ಪಿ.ಶಿವಾನಂದರವರು ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Suddi Udaya
error: Content is protected !!