ಮುಂಡಾಜೆ : ಕೂಲಿ ಕೆಲಸಕ್ಕೆಂದು ಹೋದ ಮಹಿಳೆಯೋವ೯ರು ಕುಸಿದು ಬಿದ್ದು, ಪ್ರಜ್ಞೆ ತಪ್ಪಿದವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದ ದಾಖಲಿಸಿ, ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.12ರಂದು ವರದಿಯಾಗಿದೆ.
ಮುಂಡಾಜೆ ಗ್ರಾಮದ ಸನ್ಯಾಸಿಕಟ್ಟೆ ನಿವಾಸಿ ಪಾವ೯ತಿ (55ವ) ಈ ದುಘ೯ಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಅವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಗಣೇಶ ಎಂಬವರ ಮನೆಗೆ ಕೂಲಿ ಕೆಲಸಕ್ಕೆಂದು ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋಗಿದ್ದರು. ಅಲ್ಲಿ ಕೆಲಸ ಮಾಡುತ್ತಿರುವ ಸಮಯ ಸಂಜೆ ಒಮ್ಮೆಲೇ ಕುಸಿದು ಬಿದ್ದು, ಪ್ರಜ್ಞೆಯನ್ನು ಕಳೆದುಕೊಂಡರು. ಅವರನ್ನು ಆರೈಕೆ ಮಾಡಿ ಕೂಡಲೇ ಚಿಕಿತ್ಸೆಗೆ ಬಗ್ಗೆ ಕಕ್ಕಿಂಜೆ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದಿದ್ದುದರಿಂದ, ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿನ ವೈದ್ಯರ ಸಲಹೆಯಂತೆ ಕೂಡಲೇ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪುತ್ರಿ ಪುಷ್ಪಾ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿರುತ್ತದೆ.