ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ರಾಜ್ಯದ,ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿ ಬಿಗು ತಪಾಸಣೆ ಆರಂಭಿಸಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ
ಬೆಳ್ತಂಗಡಿ ಪೋಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ
ಧರ್ಮಸ್ಥಳ ಪಿ ಎಸ್ ಐ ಅನಿಲ್ ಕುಮಾರ್ ಅವರ ನಿರ್ದೇಶನದಂತೆ ತಪಾಸಣೆ ಆರಂಭಿಸಲಾಗಿದ್ದು ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ.
ದ.ಕ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಚೆಕ್ ಪೋಸ್ಟ್ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ಹಣ, ಶಸ್ತ್ರಾಸ್ತ್ರ,ಉಡುಗೊರೆ ಮದ್ಯ ಸಾಗಾಟ ಸಹಿತ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಎಲ್ಲಾ ವಾಹನಗಳನ್ನು ಈ ಚೆಕ್ ಪೋಸ್ಟ್ ನಲ್ಲಿ ತಪಾಸಣೆಗೊಳಪಡಿಸಲಾ
ಗುತ್ತದೆ ಎಂದು ತಿಳಿದುಬಂದಿದೆ.
ಫಲಕ ಅಳವಡಿಕೆ:
ಈ ಬಗ್ಗೆ ಚೆಕ್ ಪೋಸ್ಟ್ ನಲ್ಲಿ ಫಲಕ ಅಳವಡಿಸಿಲಾಗಿದ್ದು, ಪೊಲೀಸರಿಗೆ ಹೆಚ್ಚಿನ ಸೂಚನೆಗಳನ್ನು ನೀಡಲಾಗಿದೆ.
ಈಗ ಪ್ರತಿಪಾಳಿಯಲ್ಲಿ ಇಬ್ಬರು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸುವ ಕುರಿತು ಪಿಎಸ್ ಐ ಅನಿಲ್ ಕುಮಾರ್ ತಿಳಿಸಿದ್ದಾರೆ.