ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ
ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರಾದ ಡಾ || ವಿಕ್ರಮ್ ಅಮಟೆ ಯವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ *ನಾರಾವಿ,ಚಾರ್ಮಾಡಿ, ಕೊಕ್ಕಡ ಗಳಲ್ಲಿರುವ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ , ಪರಿಶೀಲಿಸಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣೆ ಕರ್ತವ್ಯ ಗಳ ಬಗ್ಗೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿ
ಚೆಕ್ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.


ನಕ್ಸಲ್ ಪೀಡಿತ ಹಾಗೂ ಸೂಕ್ಷ್ಮ ಮತಗಟ್ಟೆ ಗಳಾದ ನಾವೂರು, ತೋಟತಾಡಿ, ಉಜಿರೆ ಮತಗಟ್ಟೆ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಚುನಾವಣೆ ಸೂಕ್ಷ್ಮ ಪ್ರದೇಶಗಳಾದ ನಾವೂರು ಹಾಗೂ ಚಾರ್ಮಾಡಿ ಗ್ರಾಮ ಗಳಿಗೆ ಭೇಟಿ ನೀಡಿ ಸಿಟಿಜನ್ ಕಮಿಟಿ ಸಭೆ ನಡೆಸಿ, ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಕಾರ್ಯ ಹಾಗೂ ಸ್ಥಳೀಯ ರೌಡಿ ಶೀಟರ್ ಗಳಿಗೆ ಎಚ್ಚರಿಕೆಯನ್ನು ನೀಡಿದರು.

‌ ಮುಂಬರುವ ಚುನಾವಣೆ ಕರ್ತವ್ಯಕ್ಕೆ ಜಿಲ್ಲೆಗೆ ಆಗಮಿಸುವ ಅರೆ ಸೇನಾಪಡೆ ಗಳಿಗೆ ವಾಸ್ತವ್ಯ ಕಲ್ಪಿಸಲು ಗುರುತಿಸಿರುವ ಶಾಲೆ , ಕಾಲೇಜು ಗಳಿಗೆ ಭೇಟಿ ನೀಡಿ ಸುರಕ್ಷತೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿರುತ್ತಾರೆ.
ಬೆಳ್ತಂಗಡಿ ಪೊಲೀಸ್ ಸರ್ಕಲ್ ವ್ಯಾಪ್ತಿಗೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಸಂತ್ರಸ್ಥರ ಜೊತೆ ಸಂತ್ರಸ್ಥರ ಸಭೆ ನಡೆಸಿ, ಪ್ರಕರಣಗಳ ಪ್ರಸ್ತುತ ಹಂತದ ಬಗ್ಗೆ ಮಾಹಿತಿ ನೀಡಿ, ಸಮಸ್ಯೆಗಳ ಬಗ್ಗೆ ವಿಚಾರಿಸಿ,ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ಬೆಳ್ತಂಗಡಿ ಯಲ್ಲಿ ಪೊಲೀಸ್ ಅಧಿಕಾರಿ ಹಾಗೂ* ಸಿಬ್ಬಂದಿಗಳ ಬ್ರಿಫಿಂಗ್ ಸಭೆ ನಡೆಸಿ, ಸಿಬ್ಬಂದಿಗಳ ಕುಂದುಕೊರತೆಗಳನ್ನು ವಿಚಾರಿಸಿ, ಮುಂಬರುವ ಚುನಾವಣೆ ಗೆ ಸಂಬಂದಿಸಿದ ಕಾನೂನುಗಳ ಬಗ್ಗೆ ಮಾಹಿತಿ ನೀಡಿ,ಪರಿಣಾಮಕಾ
ರಿಯಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ಮಾರ್ಗದರ್ಶನ ನೀಡಿದರು.

Leave a Comment

error: Content is protected !!