September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

ಬೆಳ್ತಂಗಡಿ: ಮುಂದಿನ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೆಳ್ತಂಗಡಿ ಬೆಸ್ಟ್ ಪೌಂಡೇಶನ್‌ನ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಹೆಸರು ಅಂತಿಮಗೊಂಡಿದ್ದು, ಪ್ರಥಮ ಪಟ್ಟಿಯಲ್ಲಿ ಘೋಷಣೆಯಾಗಿದೆ.


ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬೆಳ್ತಂಗಡಿಯಿಂದ ರಕ್ಷಿತ್ ಶಿವರಾಮ್ ಅವರಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಆಗಿ ಆಯ್ಕೆಗೊಳಿಸಿದೆ. ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ರಕ್ಷಿತ್ ಶಿವರಾಂ ಅವರ ಹೆಸರಿದ್ದು, ಯಾರು ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ ಎಂಬ ಕುತೂಹಲ ಕಳೆದ ಕೆಲ ದಿನಗಳಿಂದ ಕಾರ್ಯಕರ್ತರಲ್ಲಿ ನಡೆಯುತ್ತಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.
ಮಾಜಿ ಪೊಲೀಸ್ ಅಧಿಕಾರಿಯಾಗಿರುವ ಬಿ.ಕೆ.ಶಿವರಾಮ್ ಅವರ ಪುತ್ರರಾಗಿರುವ ರಕ್ಷಿತ್ ಅವರು ಬೆಳ್ತಂಗಡಿ ಹೇರಾಜೆ ಮನೆತನದವರಾಗಿರುವ ನಿವೃತ್ತ ಎಸ್ಪಿಗಳಾದ ಪಿತಾಂಬರ ಹೇರಾಜೆ ಮತ್ತು ಮಿತ್ರ ಹೇರಾಜೆಯವರ ಕಿರಿಯ ಸಹೋದರಿ ಲತಾರವರ ಪುತ್ರ.

Related posts

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya
error: Content is protected !!