September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

ಬೆಳ್ತಂಗಡಿ: ಮುಂದಿನ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೆಳ್ತಂಗಡಿ ಬೆಸ್ಟ್ ಪೌಂಡೇಶನ್‌ನ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಹೆಸರು ಅಂತಿಮಗೊಂಡಿದ್ದು, ಪ್ರಥಮ ಪಟ್ಟಿಯಲ್ಲಿ ಘೋಷಣೆಯಾಗಿದೆ.


ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬೆಳ್ತಂಗಡಿಯಿಂದ ರಕ್ಷಿತ್ ಶಿವರಾಮ್ ಅವರಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಆಗಿ ಆಯ್ಕೆಗೊಳಿಸಿದೆ. ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ರಕ್ಷಿತ್ ಶಿವರಾಂ ಅವರ ಹೆಸರಿದ್ದು, ಯಾರು ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ ಎಂಬ ಕುತೂಹಲ ಕಳೆದ ಕೆಲ ದಿನಗಳಿಂದ ಕಾರ್ಯಕರ್ತರಲ್ಲಿ ನಡೆಯುತ್ತಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.
ಮಾಜಿ ಪೊಲೀಸ್ ಅಧಿಕಾರಿಯಾಗಿರುವ ಬಿ.ಕೆ.ಶಿವರಾಮ್ ಅವರ ಪುತ್ರರಾಗಿರುವ ರಕ್ಷಿತ್ ಅವರು ಬೆಳ್ತಂಗಡಿ ಹೇರಾಜೆ ಮನೆತನದವರಾಗಿರುವ ನಿವೃತ್ತ ಎಸ್ಪಿಗಳಾದ ಪಿತಾಂಬರ ಹೇರಾಜೆ ಮತ್ತು ಮಿತ್ರ ಹೇರಾಜೆಯವರ ಕಿರಿಯ ಸಹೋದರಿ ಲತಾರವರ ಪುತ್ರ.

Related posts

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ರಿಕ್ಷಾ ಪಾರ್ಕಿಂಗ್ ಸಮಸ್ಯೆ- ಶಾಸಕರ ನೇತೃತ್ವದಲ್ಲಿ ಸಭೆ :ವಾಹನ ಚಾಲಕರಿಗೆ, ಅಂಗಡಿ ಮಾಲಕರಿಗೆ ತೊಂದರೆ ಉಂಟಾಗದಂತೆ ಹೆದ್ದಾರಿ ಬದಿ ಗುರುತು ಹಾಕಿ ರಿಕ್ಷಾ ಪಾರ್ಕಿಂಗ್ ಗೆ ವ್ಯವಸ್ಥೆ: ಶಾಸಕರ ಭರವಸೆ

Suddi Udaya
error: Content is protected !!