ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

ಅಳದಂಗಡಿ: ಇತಿಹಾಸ ಪ್ರಸಿದ್ದ ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ವಿವಿಧ ವೈದಿಕ,ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆದಿದ್ದು ಇದರ ಅಂಗವಾಗಿ ದೇವರಿಗೆ ದೃಢಕಲಶಾಭಿಷೇಕವು ಮಾ26 ರಂದು ನಡೆಯಿತು.

48 ದಿನಗಳ ನಂತರ ನಡೆಯುವ ಈ ವಿಶೇಷ ಕಾರ್ಯಕ್ರಮದಲ್ಲಿ ಬೆಳಿಗ್ಗೆಯಿಂದ ಭಜನೆ, ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಶಶಿಧರ ಡೋಂಗ್ರೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಪ್ರಧಾನ ಆರ್ಚಕ ಸೋಮನಾಥ ಮಯ್ಯ, ಕೋಶಾಧಿಕಾರಿ ಅನಿಲ್ ಕುಮಾರ್ ಮಾಳಿಗೆ ಮನೆ ಹಾಗೂ ವ್ಯವಸ್ಥಾಪನಾ, ಜೀರ್ಣೋದ್ಧಾರ,ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

Related posts

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya
error: Content is protected !!