April 2, 2025
ತಾಲೂಕು ಸುದ್ದಿ

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

ಪ್ರಾಣಾಪಾಯದಿಂದ ಪಾರಾದ ಆಶೋಕ್

ಬೆಳ್ತಂಗಡಿ: ವಿಷಪೂರಿತ ಹಾವುಗಳನ್ನು ಹಿಡಿದು ಖ್ಯಾತರಾದ
ಹಾವುಗಳ ಸಂ ರಕ್ಷಕರಾದ ಸ್ನೇಕ ಅಶೋಕ್ ಲಾಯಿಲ ಇವರು ನಾಗರ ಹಾವು ಹಿಡಿಯುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ಇಂದು ಮನೆಯೊಂದರಲ್ಲಿ ನಾಗರ ಹಾವು ಇರುವುದಾಗಿ ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ಬಂದಿತ್ತು ಇದರ ರಕ್ಷಣೆಗೆ ತಕ್ಷಣ ಹೊರಟ ಅವರು ನಾಗರ ಹಾವನ್ನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ ಎನ್ನಲಾಗುತ್ತಿದೆ.

ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Related posts

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya
error: Content is protected !!