ಬೆಳ್ತಂಗಡಿ: ಬೆಳ್ತಂಗಡಿ ನಗರದ ಮುಖ್ಯ ಭಾಗದಲ್ಲಿರುವ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣಗೊಂಡಿರುವ ನೂತನ ನಿರೀಕ್ಷಣಾ ಮಂದಿರದ ಲೋಕಾರ್ಪಣೆಯು ಮಾ28 ರಂದು ನಡೆಯಿತು

ನೂತನ ನಿರೀಕ್ಷಣಾ ಮಂದಿರವನ್ನು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ತಹಶಿಲ್ದಾರ್ ಸುರೇಶ್, ತಾ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ,
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗುರುಪ್ರಸಾದ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕುದುರೆಮುಖ ಕಬ್ಬಿನದ ಅದಿರು ಕಂಪೆನಿಯ ವತಿಯಿಂದ ಅರ್ಹ 20 ಜನ ಬುಡಕಟ್ಟು ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ಹುಲ್ಲು ಕತ್ತರಿಸುವ ಯಂತ್ರ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದ್ವಿಚಕ್ರ ವಿತರಣೆ ನಡೆಯಿತು.
ಇಗಾಗಲೇ ನಿರೀಕ್ಷಣಾ ಮಂದಿರದ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.