March 7, 2026
ಗ್ರಾಮಾಂತರ ಸುದ್ದಿ

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ವಿರುದ್ಧ ಹಾಗೂ ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ , ಕಳಪೆ ಮಟ್ಟದ ಕಾಮಗಾರಿಗಳನ್ನು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಕಳೆದ 28 ಘಂಟೆಗಳಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ನಡೆಯುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಶೇಖರ್ ಲಾಯಿಲ ಮಂಗಳವಾರ ಮಧ್ಯಾಹ್ನ ಕೊನೆಗೊಳಿಸಿದರು.

ಕಳೆದ ಮಾರ್ಚ್ 20 ರಿಂದ ನಿರಂತರವಾಗಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿತ್ತು. ಅಧಿಕಾರಿಗಳು ಸ್ಪಂದಿಸದ ಕಾರಣ ಮಾರ್ಚ್ 27 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ ಸಿಪಿಐ(ಎಂ) ಮುಖಂಡ ಶೇಖರ್ ಲಾಯಿಲ ಸೋಮವಾರ ರಾತ್ರಿಯೂ ಮುಂದುವರಿಸಿದರು. ಮಂಗಳವಾರ ಮಧ್ಯಾಹ್ನ ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಕುಮಾರ್ ಅವರು ಶೇಖರ್ ಲಾಯಿಲ ಅವರೊಂದಿಗೆ ಮಾತುಕತೆ ನಡೆಸಿದರಲ್ಲದೆ ಲಿಖಿತ ರೂಪದಲ್ಲಿ ಹೋರಾಟಕ್ಕೆ ಸ್ಪಂದಿಸಿದ ನಂತರ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರು.

ಬೆಳ್ತಂಗಡಿ ತಾಲೂಕಿನಲ್ಲಿ ನಡೆಯುತ್ತಿರುವ ಎಲ್ಲಾ ರೀತಿಯ ಅಕ್ರಮ ಮರಳುಗಾರಿಕೆಯನ್ನು ಗ್ರಾಮಕರಣೀಕರು ಸೇರಿದಂತೆ ಕಂದಾಯ ನಿರೀಕ್ಷಕರು ಧಾಳಿ ನಡೆಸಿ ಸಂಬಂಧಪಟ್ಟ ಪೋಲಿಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವ ಬಗ್ಗೆ ಲಿಖಿತ ಬರವಸೆ ನೀಡಿದರು. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ , ಕಳಪೆ ಮಟ್ಟದ ಕಾಮಗಾರಿಗಳ ಬಗ್ಗೆ ಸಂಬಂಧಿಸಿದ

ಅನುಷ್ಠಾನಾಧಿಕಾರಿಗಳಿಂದ ಸೂಕ್ತ ಮಾಹಿತಿ ಪಡೆದು ಸರ್ಕಾರಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮನವಿ ಸಲ್ಲಿಸುವ ಬಗ್ಗೆ ಲಿಖಿತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ವಿವಿಧೆಡೆ ನಡೆಯುತ್ತಿರುವ ಅಕ್ರಮಗಳ ಮಾಹಿತಿಯನ್ನು ಶೇಖರ್ ಲಾಯಿಲ ನೀಡಿದರು. ಅಕ್ರಮಗಳನ್ನು ತಡೆಯಲು ವಿಫಲವಾದರೆ ಮತ್ತೊಮ್ಮೆ ಅಮರಣಾಂತ ಉಪವಾಸ ಕೈಗೊಳ್ಳಬೇಕಾಗುತ್ತದೆ ಎಂದು ತಾಲೂಕು ಆಡಳಿತವನ್ನು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

Related posts

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya
error: Content is protected !!