27.8 C
ಪುತ್ತೂರು, ಬೆಳ್ತಂಗಡಿ
May 19, 2025
ತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

ಉಜಿರೆ:ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಕಳೆದ 35 ವರುಷಗಳಿಂದ ಸಸ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಕುಮಾರ್ ಹೆಗ್ಡೆ ಬಿ ಎ ಅವರು ಕಾಲೇಜಿನ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿದ್ದಾರೆ. ಡಾ. ಎ ಜಯಕುಮಾರ್ ಶೆಟ್ಟಿ ನಿವೃತ್ತಿಯಾಗಿದ್ದರಿಂದ ತೆರವಾಗಿರುವ ಪ್ರಾಂಶುಪಾಲರ ಹುದ್ದೆಯನ್ನು ಪ್ರಸ್ತುತ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರೂ, ವಿಜ್ಞಾನ ನಿಕಾಯದ ಡೀನ್ ಆಗಿರುವ ಡಾ. ಬಿ ಎ ಕುಮಾರ್ ಹೆಗ್ಡೆ ಅಲಂಕರಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ರ್ಯಾಂಕ್ ನೊಂದಿಗೆ ಎಂಎಸ್ಸಿ ಪದವಿ ಪಡೆದುಕೊಂಡರು. ಬಳಿಕ ಎಂಫಿಲ್, ಪಿಜಿಡಿ ಹೆಚ್ ಆರ್ ಎಂ, ಪಿ ಹೆಚ್ ಡಿ ಯನ್ನು ಪಡೆದಿದ್ದಾರೆ. ಡಾ. ಬಿ.ಎ ಕುಮಾರ್ ಹೆಗ್ಡೆಯವರು ಕಳೆದ 35 ವರ್ಷಗಳಿಂದ
ಉಜಿರೆಯ ಎಸ್ ಡಿ ಎಮ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಕಾಲೇಜಿನ ಎನ್ಎಸ್ಎಸ್ ಅಧಿಕಾರಿಯಾಗಿ ಶ್ರೇಷ್ಠ ಯೋಜನಾಧಿಕಾರಿ ರಾಜ್ಯ ಪ್ರಶಸ್ತಿ ಹಾಗೂ ಇಂದಿರಾಗಾಂಧಿ ಎನ್ಎಸ್ಎಸ್ ರಾಷ್ಟ್ರಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆ ಇವರದ್ದಾಗಿದೆ. ಕಾಲೇಜಿನ ವಾರ್ಷಿಕ ಸಂಚಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಐದು ವರ್ಷಗಳ ಕಾಲ ಜವಾಬ್ದಾರಿ ನಿರ್ವಹಿಸಿ ವಿಶ್ವವಿದ್ಯಾನಿಲಯ ಮಟ್ಟದ ಶ್ರೇಷ್ಠ ವಾರ್ಷಿಕ ಸಂಚಿಕೆ ಪ್ರಶಸ್ತಿಯನ್ನು ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಂಶೋಧನಾ ನಿಯತಕಾಲಿಕೆಗಳಲ್ಲಿ ಲೇಖನಗಳನ್ನು ಪ್ರಕಟಪಡಿಸಿದ್ದಾರೆ.

ವ್ಯಕ್ತಿತ್ವ ವಿಕಸನ ಸಂಘಟನೆ ಜೆಸಿಐ ಸಂಸ್ಥೆಯ ಪದಾಧಿಕಾರಿಯಾಗಿ, ತರಬೇತುದಾರನಾಗಿ ನೂರಾರು ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮಗಳನ್ನ ನಡೆಸಿ ಕೊಟ್ಟಿದ್ದಾರೆ.ಕಾರ್ಯಕ್ರಮ ನಿರೂಪಕರಾಗಿ ಅನೇಕ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳ ನಿರೂಪಣೆ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸಾಂಸ್ಕೃತಿಕ ಸಂಘಟನೆ ಸಮೂಹ ಇದರ ಅಧ್ಯಕ್ಷರಾಗಿರುವ ಇವರು ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಕೃತಿ, ಕಲೆ,
ಅಧ್ಯಕ್ಷರಾಗಿರುವ ಇವರು ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಕೃತಿ, ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಪರಿಸರ- ಈ ವಿಷಯಗಳಿಗೆ ಸಂಬಂಧಪಟ್ಟ ಹಾಗೆ ಅನೇಕ ತಜ್ಞ ಉಪನ್ಯಾಸಗಳನ್ನು ನೀಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಅಧ್ಯಾಪಕರ ಸಂಘ ಅಮುಕ್ತ ಇದರ ಉಪಾಧ್ಯಕ್ಷರಾಗಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ
ಸಲ್ಲಿಸಿದ್ದಾರೆ.

Related posts

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya
error: Content is protected !!