25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

ಪಿಲ್ಯ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್

ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನು
ಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಪಡಿಸಿಕೊಂಡ ಪ್ರಕರಣ
ಮಾ. 31 ರಂದು ವರದಿಯಾಗಿದೆ.

ಅಬಕಾರಿ ಉಪ ಆಯುಕ್ತಕರು, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ಹಾಗೂ ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ರವರ ನಿರ್ದೆಶನದಂತೆ, ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿರುವ ವೇಳೆ ಈ ಪ್ರಕರಣ ಪತ್ತೆಯಾಗಿದೆ.

ಸ್ಥಳದಿಂದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು ರೂ.3,240 ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ನವೀನ್, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಕಾನ್ಸ್‌ಟೇಬಲ್ ಭೋಜ ಕೆ., ವಿನೋಯ್ ಸಿ.ಜಿ ಮತ್ತು ವಾಹನ ಚಾಲಕ ನವೀನ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ನವೀನ್ ಕುಮಾರ್ ನಿರೀಕ್ಷಕರು, ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!