24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿಶಾಲಾ ಕಾಲೇಜು

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

ಬೆಳ್ತಂಗಡಿ: 2023-24ನೇ ಸಾಲಿನ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಪ್ರಕಟಣೆಯ ಪ್ರಕಾರ ಈ ಸಾಲಿನ ಮೊದಲನೇ ಶೈಕ್ಷಣಿಕ ಅವಧಿಯು ಮೇ 29 ರಿಂದ ತರಗತಿಗಳು ಆರಂಭವಾಗಲಿವೆ.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ.
ಈ ಮಾರ್ಗಸೂಚಿಯಲ್ಲಿ ವಾರ್ಷಿಕ/ ಮಾಹೆವಾರು ಪಾಠ ಹಂಚಿಕೆ, ಪತ್ಯೇತರ ಚಟುವಟಿಕೆಗಳು, ಪರೀಕ್ಷೆ ಮತ್ತು ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಸಿಸಿಇ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯ ಆಗುವಂತೆ ಶೈಕ್ಷಣಿಕ ಅವಧಿಗಳು, ರಜಾದಿನಗಳನ್ನು ಯೋಜಿಸಿ ಸಿದ್ಧಪಡಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
2023-24ನೇ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಅಕ್ಟೋಬರ್ 7 ರವರಗೆ ನಡೆಯಲಿದೆ. ಎರಡನೇ ಶೈಕ್ಷಣಿಕ ಅವಧಿ ಅಕ್ಟೋಬರ್ 25, 2023 ರಿಂದ ಆರಂಭವಾಗಿ ಏಪ್ರಿಲ್ 10, 2024 ಕ್ಕೆ ಮುಕ್ತಾಯವಾಗಲಿದೆ.

ಇನ್ನು ಮಧ್ಯಂತರ ರಜೆ 2023ರ ಅಕ್ಟೋಬರ್ 8 ರಿಂದ ಅಕ್ಟೋಬರ್ 24 ರವರೆಗೆ ಇರಲಿದೆ. ಬೇಸಿಗೆ ರಜೆ 2024ರ ಏಪ್ರಿಲ್ 11 ರಿಂದ ಮೇ 28 ರ ವರೆಗೆ ನೀಡಲಾಗಿದೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!