25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಸಂಕೇಶ ಎಂಬಲ್ಲಿ ಕೋಟಿಯ್ಯಪ್ಪ ಎಂಬಾತ ತನ್ನ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟದ ಉದ್ದೇಶಕ್ಕಾಗಿ ತಯಾರಿಸುತ್ತಿರುವ ಮಾಹಿತಿ ಪಡೆದ ಅಬಕಾರಿ ಇಲಾಖೆ ದಾಳಿ ನಡೆಸಿ 5 ಲೀ ಕಳ್ಳಭಟ್ಟಿ ಸಾರಾಯಿ ಹಾಗೂ ಪರಿಕರಣಗಳನ್ನು ವಶಪಡಿಸಿಕೊಂಡ ಪ್ರಕರಣಮಾ. 31 ರಂದು ವರದಿಯಾಗಿದೆ.

ಆರೋಪಿ ಕೋಟಿಯ್ಯಪ್ಪ ‌ಸ್ಥಳದಿಂದ ಪರಾರಿಯಾಗಿದ್ದು, ಅಬಕಾರಿ ನಿರೀಕ್ಷಕರು ಕೇಸ್ ದಾಖಲಿಸಿರುತ್ತಾರೆ. ಅಬಕಾರಿ ಉಪ ಆಯುಕ್ತಕರು, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ಹಾಗೂ ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ರವರ ನಿರ್ದೆಶನದಂತೆ, ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿರುವ ವೇಳೆ ಈ ಪ್ರಕರಣ ಪತ್ತೆಯಾಗಿದೆ.

ಸ್ಥಳದಿಂದ ಕಳ್ಳಭಟ್ಟಿ ಸಾರಾಯಿಯನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು 5,200 ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ನವೀನ್, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಕಾನ್ಸ್‌ಟೇಬಲ್ ಭೋಜ ಕೆ., ವಿನೋಯ್ ಸಿ.ಜಿ ಮತ್ತು ವಾಹನ ಚಾಲಕ ನವೀನ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ನವೀನ್ ಕುಮಾರ್ ನಿರೀಕ್ಷಕರು, ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya
error: Content is protected !!