24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸಾಧಕರು

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಸುರತ್ಕಲ್‌ನ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಐತಿಹಾಸಿಕ ದಾಖಲೆ ಹೊಂದಿರುವ ಶ್ರೀ ಧರ್ಮಸ್ಥಳ ಮೇಳದ ಯಶಸ್ವಿ ಸಂಚಾಲಕರಾಗಿ ನಾಲ್ಕು ದಶಕಗಳಿಗೂ ಮಿಕ್ಕಿದ ಅನುಭವವಿರುವ, ಧಾರ್ಮಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮತ್ತು ಬ್ಯಾಂಕಿಂಗ್ ಮೊದಲಾದ ಆಡಳಿತಾತ್ಮಕ ಅನುಭವ ಪರಿಗಣಿಸಿ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಕಾರ್ಯಾಧ್ಯಕ್ಷ ಅಗರಿ ರಾಘವೇಂದ್ರ ರಾವ್‌ ತಿಳಿಸಿದ್ದಾರೆ.
ಅಗರಿ ಶೈಲಿಯನ್ನು ರಂಗದಲ್ಲಿ ಬಳಸಿ, ಅದರ ಉಳಿವು ಮತ್ತು ಬೆಳೆಯುವಿಕೆಯಲ್ಲಿ ತೊಡಗಿರುವ ಭಾಗವತ ಗಿರೀಶ್ ರೈ ಕಕ್ಯಪದವು ಅವರಿಗೆ ಅಗರಿ ಶೈಲಿ ಪ್ರಶಸ್ತಿ ಮತ್ತು ಅಗರಿ ಶ್ರೀನಿವಾಸ ಭಾಗವತರ ಶ್ರೀ ದೇವಿಮಹಾತ್ಮ ಪ್ರಸಂಗದ ವಿಶೇಷ ಅಧ್ಯಯನ ನಡೆಸಿ ಪ್ರಬಂಧ ಮಂಡಿಸಿರುವ ವಾದಿರಾಜ ಕಲ್ಲೂರಾಯರಿಗೆ ಅಗರಿ ವಿಶೇಷ ಸನ್ಮಾನ ಈ ಸಂದರ್ಭ ನಡೆಸಲಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya
error: Content is protected !!