23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ಇದರ ವತಿಯಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ ಪಿನಾಕಿ ಸಭಾಭವನದಲ್ಲಿ ನಡೆಯಿತು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ಬೆಳ್ತಂಗಡಿ ನಗರ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ.ಈಗಾಗಲೇ‌ನಗರದ ಹೃದಯ ಭಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಬೆಳ್ತಂಗಡಿಯ ಸೌಂದರ್ಯಕ್ಕೆ ಮುಕುಟಪ್ರಾಯವಾಗಲಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ನಗರದಲ್ಲಿ ಅತೀ ಹೆಚ್ಚು ಮತ ಬರುವಂತೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.
ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ನಗರ ಮಹಾಶಕ್ತಿಕೇಂದ್ರ ಅಧ್ಯಕ್ಷ ಗಣೇಶ್, ಯುವಮೋರ್ಚಾ ಅಧ್ಯಕ್ಷ ಯಶವಂತ ಗೌಡ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಪ್ರಮುಖರಾದ ಮುಗುಳಿ ನಾರಾಯಣ ರಾವ್ ಇದ್ದರು.

Related posts

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!