September 6, 2026
ಗ್ರಾಮಾಂತರ ಸುದ್ದಿ

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಆರಂಭಗೊಂಡಿದ್ದು, ಎ.೩ರಂದು ತಂತ್ರಿಗಳನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.

ಬಳಿಕ ಆಚಾರ್ಯವರಣ, ದೇವನಾಂದೀ, ತೋರಣ ಮೂಹೂರ್ತ, ಉಗ್ರಾಣ ಮುಹೂರ್ತ, ಭೂ ಶುದ್ದಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಪಾಕ ಶಾಲೆಯನ್ನು ಜಗದೀಶ್ ಪಡಿವಾಳ್ ಮಾಪಲಾಡಿ ಬೆಂಗಳೂರು ಉದ್ಘಾಟಿಸಿದರು. ಎ.೪ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ

ಮೇಲಂತಬೆಟ್ಟು ದೇವಸ್ಥಾನಕ್ಕೆ ಭಕ್ತರಿಂದ ಹೊರಕಾಣಿಕೆ ಹಾಗೂ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಗೊಳ್ಳಲಿರುವ ನೂತನ ಗಣಪತಿ ವಿಗ್ರಹ ಹಾಗೂ ಶ್ರೀ ನಾರಾಯಣ ಗುರುಗಳ ಪೀಠದ ಮೆರವಣಿಗೆ ನಡೆಯಲಿದೆ.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎಂ ದಯಾಕರ್ ಭಟ್ ಉಜಿರೆ, ಜೀರ್ಣೋದ್ಧಾರ

ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಬರೆಮೇಲು, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್ ಮುಂಡೂರು, ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಸ್ವಾಗತ ಸಮಿತಿ ಸಂಚಾಲಕ ಚಂದ್ರರಾಜ್ ನೂಜೆಲು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್ ಕುಲಾಲ್ ಪಕ್ಕಿದಕಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕು.ಮನಶ್ರೀ ಬೆಳಾಲು ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya
error: Content is protected !!