ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು


ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಸಂಪರ್ಕ ರಸ್ತೆಗೆ ಏಕಾಏಕಿ ಹಾಕಲಾಗಿರುವ ಬೇಲಿಯನ್ನು ಪೊಲೀಸರು ಹಾಗೂ ಮೇಲಂತಬೆಟ್ಟು ಗ್ರಾ.ಪಂ.ನ ಪ್ರಮುಖರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು.
ಮೇಲಂತಬೆಟ್ಟು ದೇವಸ್ಥಾನದಲ್ಲಿ ಎ. ೩ರಿಂದ ೭ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಸಂಬಂಧ ಸಂಪರ್ಕ ರಸ್ತೆಯನ್ನು ನಿನ್ನೆ ಅಗಲೀಕರಣಗೊಳಿಸುವ ಕೆಲಸ ಆರಂಭಿಸಿದಾಗ, ಇದು ತಮಗೆ ಸೇರಿದ ಜಾಗ ಎಂದು ಹೇಳಿ ರಸ್ತೆ ಅಭಿವೃದ್ಧಿಗೆ ಸ್ಥಳೀಯರಾದ ಸಚಿನ್ ನೂಜೋಡಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ತಡರಾತ್ರಿ ಬೇಲಿ ಹಾಕಿ ಬಂದ್ ಮಾಡಿದ್ದರು. ಏಕಾಏಕಿ ರಸ್ತೆಯನ್ನು ಬಂದ್ ಮಾಡಿದ್ದರಿಂದ ಭಕ್ತರಿಗೆ ಸಮಸ್ಯೆಯಾಗಿದ್ದು, ಸಂಜೆ
ಪೊಲೀಸರು ಹಾಗೂ ಪಂಚಾಯತ್‌ರವರ ಸಮ್ಮುಖದಲ್ಲಿ ಬೇಲಿಯನ್ನು ತೆರವುಗೊಳಿಸಲಾಗಿದೆ ಎಂದು ವರದಿಯಾಗಿದೆ.

Related posts

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ: ಶಿವಪ್ಪ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya
error: Content is protected !!