ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಪಾಕ ಶಾಲೆಯನ್ನು ಜಗದೀಶ್ ಪಡಿವಾಳ್ ಮಾಪಲಾಡಿ ಬೆಂಗಳೂರು ಉದ್ಘಾಟಿಸಿದರು. ,
ಎ.೩ರಂದು ತಂತ್ರಿಗಳನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.
ಬಳಿಕ ಆಚಾರ್ಯವರಣ, ದೇವನಾಂದೀ, ತೋರಣ ಮೂಹೂರ್ತ, ಉಗ್ರಾಣ ಮುಹೂರ್ತ, ಭೂ ಶುದ್ದಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
. ಎ.೪ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮೇಲಂತಬೆಟ್ಟು ದೇವಸ್ಥಾನಕ್ಕೆ ಭಕ್ತರಿಂದ ಹೊರಕಾಣಿಕೆ ಹಾಗೂ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಗೊಳ್ಳಲಿರುವ ನೂತನ ಗಣಪತಿ ವಿಗ್ರಹ ಹಾಗೂ ಶ್ರೀ ನಾರಾಯಣ ಗುರುಗಳ ಪೀಠದ ಮೆರವಣಿಗೆ ನಡೆಯಲಿದೆ.
ಪಾಕ ಶಾಲೆ ಉದ್ಘಾಟನೆ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎಂ ದಯಾಕರ್ ಭಟ್ ಉಜಿರೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಬರೆಮೇಲು, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್ ಮುಂಡೂರು, ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಸ್ವಾಗತ ಸಮಿತಿ ಸಂಚಾಲಕ ಚಂದ್ರರಾಜ್ ನೂಜೆಲು, ಮನೋಹರ ಪಡಿವಾಳ್ , ಭಗೀರಥ ಜಿ. ,ರಮಾನಂದ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್ ಕುಲಾಲ್ ಪಕ್ಕಿದಕಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.