25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ


ಮಚ್ಚಿನ: ಬೇಸಿಗೆ ಶಿಬಿರದ ಪ್ರಯುಕ್ತ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಜೆಸಿಐ ಘಟಕ ಮಡಂತ್ಯಾರು ಇವರ ಸಹಭಾಗಿತ್ವದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ನೆತ್ತರ ಸ.ಕಿ.ಪ್ರಾ. ಶಾಲೆಯಲ್ಲಿ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಮೋಹಿನಿ ಯೋಗೀಶ್ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಘಟಕ ಮಡಂತ್ಯಾರು ಇದರ ಅಧ್ಯಕ್ಷ ಅಶೋಕ್ ಕುಮಾರ್ ಗುಂಡಿಯಲ್ಕೆ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾರ್ಯ ನಮ್ಮಿಂದಾಗ ಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಸುಖೇಶ್ ಬಾಬು, ಜೆಸಿಐ ನ ವಲಯಾಧಿಕಾರಿ ನವೀನ್ ಕೊಡ್ಲಕ್ಕೆ, ಯಕ್ಷಗಾನ ನಾಟ್ಯ ಗುರು ದೇವಿಪ್ರಸಾದ್ ಗುರುವಾಯನಕೆರೆ, ಶಾಲಾ ಮುಖ್ಯೋಪಾಧ್ಯಾಯ ಸೀತಾರಾಮ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಗೌರವ ಶಿಕ್ಷಕಿ ಚಿರಂಜಿನಿ ನಿರೂಪಿಸಿ ಸ್ವಾಗತಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ರೂಪಾ ರುಫೀನಾ ರೊಡ್ರಿಗಸ್ ಧನ್ಯವಾದವಿತ್ತರು.

Related posts

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya
error: Content is protected !!